ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸದಸ್ಯತ್ವ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ವಿವಿಧ ಮೋರ್ಚಾಗಳ ಸಭೆ ಈ ದಿನ ಭಾರತೀಯ ಜನತಾ ಪಾರ್ಟಿ ಬಿ.ಸಿ.ರೋಡು ಕಾರ್ಯಲಯದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಮೋರ್ಚಾಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಜಿಲ್ಲಾ ಬಿ.ಜೆ.ಪಿ ಪ್ರ.ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕ್ಷೇತ್ರ ಸಂಚಾಲಕರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾದ ಮೋನಪ್ಪ ದೇವಸ್ಯ, ಉಪಾಧ್ಯಕ್ಷರಾದ ವಿಜಯ ರೈ ಮತ್ತಿತರು ಉಪಸ್ಥಿತರಿದ್ದರು.