ಬಂಟ್ವಾಳ: ಚುನಾವಣೆ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಮಂಗಳವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖ ಬಿಜೆಪಿ ಕಾರ್ಯಕರ್ತರ ಸಿದ್ದತಾ ಸಭೆ ಮತ್ತು ಕಾರ್ಯಾಗಾರ ನಡೆಯಿತು.
ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿಸಲು ಜನತೆ ನಿಶ್ಚಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರಕಾರದ ಐದು ವರ್ಷಗಳ ಜನಪರ ಯೋಜನೆ ಹಾಗೂ ಸಾಧನೆಯನ್ನು ಮನೆ, ಮನೆಗೆ ತಲುಪಿಸುವ ಮೂಲಕ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗುವ ನಿಟ್ಟಿನಲ್ಲಿ ಪಕ್ಷದ ರಾಷ್ಟ್ರೀಯ ಮಂಡಳಿಯ ಸೂತ್ರದಡಿಯಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು. ಪಕ್ಷದ ಮುಖಂಡರಾದ ಹರಿಕೃಷ್ಣ ಬಂಟ್ವಾಳ, ಪ್ರತಾಪ ಸಂಹ ನಾಯಕ್, ಜಿ.ಆನಂದ, ಪೂಜಾ ಪೈ, ಸಂದೇಶ್ ಕುಮಾರ್ ಶೆಟ್ಟಿ, ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ ವೇದಿಕೆಯಲ್ಲಿದ್ದರು.

