Tuesday, January 27, 2026

ಶೈಖುನಾ ಮಿತ್ತಬೈಲ್ ಉಸ್ತಾದ್ ಹಾಗೂ ಶೈಖುನಾ ಹಸನ್ ಮುಸ್ಲಿಯಾರ್ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

ಜೀ ಎಚ್ ಎಮ್ ಫೌಂಡೇಶನ್ ಮೂಲರಪಟ್ಣ ಹಾಗೂ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಸಹಯೋಗದೊಂದಿಗೆ  ಶೈಖುನಾ ಮಿತ್ತಬೈಲ್ ಉಸ್ತಾದ್ ಹಾಗೂ ಶೈಖುನಾ ಹಸನ್ ಮುಸ್ಲಿಯಾರ್ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ಹಾಗೂ ದುಶ್ಚಟ ಮುಕ್ತ ಸಮಾಜ ಮಾಹಿತಿ ಶಿಬಿರವು ಫೆಬ್ರವರಿ 06 ಆದಿತ್ಯವಾರದಂದು ದಾರುಲ್ ಉಲೂಮ್ ಮದ್ರಸ ಸಭಾಂಗಣ ಮೂಲರಪಟ್ಣ ಇಲ್ಲಿ ನಡೆಯಿತು.

ರಕ್ತದಾನ ಶಿಬಿರದಲ್ಲಿ ಹಲವಾರು ಯುವಕರು ಸ್ವಯಮ್ ಪ್ರೇರಿತರಾಗಿ ರಕ್ತದಾನ ಮಾಡಿ ಸುಮಾರು 77 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ಕಾರ್ಯಕ್ರಮವನ್ನು ಸ್ಥಳೀಯ ಖತೀಬರಾದ ಅಬ್ದುಸ್ಸಲಾಮ್ ಯಮಾನಿ ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ರಫೀಕ್ ಮಾಸ್ಟರ್ ದುಶ್ಚಟ ಮುಕ್ತ ಸಮಾಜ ಎಂಬ ಶೀರ್ಷಿಕೆಯಡಿ ಎಲ್ಲರಿಗೂ ಮನದಟ್ಟುವ ರೀತಿಯಲ್ಲಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಮೊಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷರಾದ ಎಮ್ ಬಿ ಅಶ್ರಫ್ , ಜೀ ಎಚ್ ಎಮ್ ಫೌಂಡೇಶನ್ ಮೂಲರಪಟ್ಣ ಇದರ ಅಧ್ಯಕ್ಷರಾದ ಎಮ್ಎಸ್ ಶಾಲಿ,ಹಂಝ ಗುತ್ತು, ಎಮ್ ಬಿ ಇಸ್ಮಾಯಿಲ್ ಶಾಫಿ,ಝಕರಿಯಾ ಫರ್ವೀಜ್ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಾರಂಭದಲ್ಲಿ

ಜೀ ಎಚ್ ಎಮ್ ಫೌಂಡೇಶನ್ ಮೂಲರಪಟ್ಣ ಇದರ ಸಕ್ರೀಯ ಸದಸ್ಯರಾದ ಸಜೀವುದ್ದೀವ್ ಎಮ್ ಎಸ್ ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಮೊಹಮ್ಮದ್ ಅನ್ಸಾರ್ ಧನ್ಯವಾದ ಸಮರ್ಪಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...