Tuesday, February 3, 2026

ಶ್ರೀರಾಮ ಪದವಿ ಕಾಲೇಜ್: ರಕ್ತದಾನ ಶಿಬಿರ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ರೆಡ್‌ಕ್ರಾಸ್ ಘಟಕ, ಹಿರಿಯ ವಿದ್ಯಾರ್ಥಿ ಸಂಘ, ಪ್ರಣವ ವಿದ್ಯಾರ್ಥಿ ಸಂಘ ಹಾಗೂ ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಇದರ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನದ ಪ್ರಯುಕ್ತ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶರತ್ ಕುಮಾರ್ ರಾವ್ ಉದ್ಘಾಟಿಸಿ, ರಕ್ತದಾನ ಒಂದು ಜೀವಿಯನ್ನು ಉಳಿಸುವ ಶ್ರೇಷ್ಠ ದಾನ. ರಾಷ್ಟ್ರೀಯ ಯುವ ದಿನದ ಪ್ರಯುಕ್ರ ರಕ್ತದಾನ ಶಿಬಿರ ಒಂದು ಒಳ್ಳೆಯ ಬೆಳವಣಿಗೆ. ರಕ್ತದಾನದ ಮೂಲ ಚಿಂತನೆಗೆ ಪ್ರೇರಣಾ ಶಕ್ತಿ ವಿವೇಕಾನಂದರು. ಯುವಕರು ಸಮಾಜ ಮುಖಿ ಚಿಂತನೆಗಳನ್ನು ಬೆಳೆಸಿ ರಕ್ತದಾನ ಮಾಡಿದರೆ ಮಾತ್ರ ವಿವೇಕಾನಂದರು ಕಂಡ ಆದರ್ಶ ಭಾರತ ಸಾಕಾರವಾಗಲು ಸಾಧ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಶ್ರೀರಾಮ ಸೌಹಾರ್ದ ಸಹಕಾರಿ ನಿಯಮಿತ ಇದರ ಅಧ್ಯಕ್ಷ ಕುಲ್ಯಾರು ನಾರಾಯಣ ಶೆಟ್ಟಿ, ನ್ಯಾಯವಾದಿ ಶಿವಗಿರಿ ಸತೀಶ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜಯಪ್ರಶಾಂತ್ ಹಾಗೂ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 81 ಮಂದಿ ರಕ್ತದಾನ ಮಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಲತಾಶ್ರೀ ಸ್ವಾಗತಿಸಿ, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ವಂದಿಸಿದರು. ಅನಿತಾ ಕಾರ್ಯಕ್ರಮ ನಿರೂಪಿಸಿದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...