Friday, June 27, 2025

ರಕ್ತದಾನ ಮಾಡುವ ಮೂಲಕ ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಮುಂದಾಗಬೇಕು: ಡಾ| ಬದರುದ್ದೀನ್ ಎಂ.ಎನ್.

ವಿಟ್ಲ : ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿ.ವೈ.ಎಫ್.ಐ) ವಿಟ್ಲ ವಲಯ ಸಮಿತಿ ಹಾಗೂ ಪ್ರಾದೇಶಿಕ ರಕ್ತ ಪೂರಣಾ ಕೇಂದ್ರ ಮಂಗಳೂರು ಮತ್ತು ದಕ್ಷಿಣ ಕನ್ನಡ ಏಡ್ಸ್ ನಿರ್ಮೂಲನಾ ಘಟಕ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ವಿಟ್ಲ ಆರೋಗ್ಯ ಕೇಂದ್ರದಲ್ಲಿ ಜರುಗಿತು.

ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ಬದರುದ್ದೀನ್ಎಂ.ಎನ್. ಮಾತನಾಡಿ, ರಕ್ತದಾನ ಎನ್ನುವುದು ಒಂದು ಶ್ರೇಷ್ಟವಾದ ಕೆಲಸವಾಗಿದ್ದು, ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಉಳಿಸುವ ಕೆಲಸವನ್ನು ಮಾಡುವ ಮೂಲಕ ಜನರ ನಡುವೆ ಮಾನವೀಯ ಸಂಬಂದಗಳನ್ನು ಗಟ್ಟಿಗೊಳಿಸಲು ಮುಂದಾಗಬೇಕೆಂದು ಹೇಳಿದರು.

ಅತೀ ಹೆಚ್ಚು ಬಾರಿ ರಕ್ತ ದಾನ ಮಾಡಿದ ಮಹಮ್ಮದ್ ಇಕ್ಬಾಲ್ ಹಳೆಮನೆ, ಇಕ್ಬಾಲ್ ಕೋಲ್ಪೆ, ಇರ್ಪಾನ್ ಒಕ್ಕೆತ್ತೂರು ಇವರನ್ನು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದಿಂದ ಸನ್ಮಾನಿಸಲಾಯಿತು ಹಾಗೂ ವಿಟ್ಲ ಮೇಗಿನ ಪೇಟೆ ಡಿ’ ಗ್ರೂಪ್ ನ ಆಂಬ್ಯುಲೆನ್ ಚಾಲಕರಾದ ಉಬೈದ್ ಮತ್ತು ಸುಹೈಬ್ ಇವರನ್ನು ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

 

ಕಾರ್ಯಕ್ರಮದಲ್ಲಿ ಡಿ.ವೈ.ಎಫ್.ಐ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ವಿಟ್ಲ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ| ವೇದಾವತಿ, ಡಾ| ವಿಶ್ವೇಶ್ವರ ಭಟ್, ಕಾರ್ಮಿಕ ಮುಖಂಡ ರಾಮಣ್ಣ ವಿಟ್ಲ, ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ಮಾರ್ಗದರ್ಶಕ ಮಹಮ್ಮದ್ ಇಕ್ಬಾಲ್ ಹಳೆಮನೆ, ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಅದ್ಯಕ್ಷ ಸುರೇಂದ್ರ ಕೋಟ್ಯಾನ್, ಸಾಮಾಜಿಕ ಕಾರ್ಯಕರ್ತ ರಾಜಾ ಚೆಂಡ್ತಿಮಾರ್, ನ್ಯಾಯವಾದಿ ತುಳಸೀದಾಸ್ ವಿಟ್ಲ, ನ್ಯಾಯವಾದಿ ಮಹಮ್ಮದ್ ಗಝಾಲಿ ಕೆ.ಬಿ., ಪ್ರಗತಿಪರ ಬರಹಗಾರರಾದ ಅಬ್ದುಲ್ ಕಾದರ್ ಕುಕ್ಕಾಜೆ, ಸಾಧಿಕ್ ಬಂಟ್ವಾಳ, ಮಂಗಳುರು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮುಖ್ಯಸ್ಥ ಮಹೇಶ್, ಯುವ ನಾಯಕರಾದ ವಿ.ಕೆ.ಏಂ ಹಂಝ, ಉದ್ಯಮಿಗಳಾದ ವಿ.ಎಚ್. ನಿಸಾರ್ ಮುಂತಾದವರು ಉಪಸ್ಥಿತರಿದ್ದರು.

ಸಾಯ ಡಿ.ವೈ.ಎಫ್.ಐ. ಘಟಕದ ಮುಖಂಡರುಗಳಾದ ಅಶೋಕ್ ಚವರ್ಕಾಡ್ ಸುರೇಶ್ ಕುಂಞಪಾರೆ, ಯೋಗೀಶ್, ವಿಟ್ಲ ವಲಯ ಸಮಿತಿ ಅದ್ಯಕ್ಷ ನುಜುಂ ಅಳಿಕೆ, ಕಾರ್ಯದರ್ಶಿ ಜಮೀಲ್ ಎಂ., ಕೋಶಾಧಿಕಾರಿ ಆರೀಫ್ ಬಿ.ಕೆ., ಇರ್ಪಾನ್ ಒಕ್ಕೆತ್ತೂರು, ಸಪ್ವಾನ್, ತಮೀಮ್, ರಾಘವೇಂದ್ರ, ಶೌಕತ್ ಆಲಿ ಖಾನ್, ಸಲ್ಮಾನ್ ವಿ., ಶಹೀದ್ ಶೈನ್, ಸಮ್ಮಾಸ್ ಮುಂತಾದವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...