Friday, July 4, 2025

ಅಜ್ಜಿಬೆಟ್ಟು ಬಿ.ಮೂಡ ಶಾಲೆ ಹಿರಿಯ ವಿದ್ಯಾರ್ಥಿಗಳ ಸಂಘ ಅಧ್ಯಕ್ಷರಾಗಿ ಗಣೇಶ್ ಕಾಮಾಜೆ

ಬಂಟ್ವಾಳ: ಬಿ.ಸಿ.ರೋಡ್ ನ ಅಜ್ಜಿಬೆಟ್ಟುವಿನಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಯಾಗಿದ್ದು, ಅಧ್ಯಕ್ಷರಾಗಿ ಪಿಡಬ್ಲ್ಯುಡಿ ಗುತ್ತಿಗೆದಾರ ಗಣೇಶ್ ಕಾಮಾಜೆ ಆಯ್ಕೆಯಾಗಿದ್ದಾರೆ.

ಶಾಲೆಯಲ್ಲಿ ಭಾನುವಾರ ಹಿರಿಯ ವಿದ್ಯಾರ್ಥಿಗಳ ಸಭೆ ನಡೆದಿದ್ದು, ಗೌರವಾಧ್ಯಕ್ಷರಾಗಿ ಡಾ. ರಮೇಶಾನಂದ ಸೋಮಯಾಜಿ, ಅಧ್ಯಕ್ಷರಾಗಿ ಗಣೇಶ್ ಕಾಮಾಜೆ, ಉಪಾಧ್ಯಕ್ಷರಾಗಿ ಗುರುದತ್ತ ಹೆಗ್ಡೆ, ಕಾರ್ಯದರ್ಶಿಯಾಗಿ ಕಿಶೋರ್ ಕುಲಾಲ್ ಆಯ್ಕೆಗೊಂಡರು.

ಒಟ್ಟು 19 ಮಂದಿಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಈ ಸಂದರ್ಭ ಸಂದೀಪ್ ಸಾಲ್ಯಾನ್, ಸತೀಶ್ ಕುಲಾಲ್ ಮತ್ತು ಕಿಶೋರ್ ಅವರು ಅನಿಸಿಕೆ ವ್ಯಕ್ತಪಡಿಸಿದರು. ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ, ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ ಮಾಂಬಾಡಿ, ಸದಸ್ಯರಾದ ದೇವದಾಸ್, ಸಹಶಿಕ್ಷಕರಾದ ತಾಹಿರಾ, ಸುಶೀಲಾ, ಹೇಮಾವತಿ ಉಪಸ್ಥಿತರಿದ್ದರು.

More from the blog

ಮಧ್ವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಿಡ ನಾಟಿ ಹಾಗೂ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ) ಬಂಟ್ವಾಳ ಇದರ,ವಗ್ಗ ವಲಯದ ಮಧ್ವ ಒಕ್ಕೂಟದ ವತಿಯಿಂದ ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆ...

ಅಡಿಕೆ ವ್ಯಾಪಾರಿಯಿಂದ ವಂಚನೆ ಪ್ರಕರಣ : ನ್ಯಾಯಕ್ಕಾಗಿ ಡಿವೈಎಸ್ಪಿ ಗೆ ಮನವಿ..

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಅಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ರೈತರು ನ್ಯಾಯಕ್ಕಾಗಿ ದ.ಕ.ಜಿಲ್ಲಾಧಿಕಾರಿಗಳು, ಎಸ್ಪಿಯವರು ಹಾಗೂ ಬಂಟ್ವಾಳ ನಗರ ಇನ್ಸ್‌ಪೆಕ್ಟರ್ ಅವರ ಮೂಲಕ...

ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರ: ಕ್ಷಯರೋಗಿಗಳಿಗೆ ಆಹಾರ ಕಿಟ್ ವಿತರಣೆ

ಬಂಟ್ವಾಳ : ತಾಲೂಕಿನ ಇರ್ವತ್ತೂರು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಂಟು ಗ್ರಾಮಗಳ ವ್ಯಾಪ್ತಿಯ ಕ್ಷಯರೋಗಿಗಳಿಗೆ ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ ಯೋಜನೆಯಡಿ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್ ವಿತರಣಾ...

School holiday:ಬಂಟ್ವಾಳ ತಾಲೂಕಿನ ಶಾಲಾ,ಕಾಲೇಜುಗಳಿಗೆ ರಜೆ

ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ರಜೆ ಘೋಷಿಸಲಾಗಿದೆ...