ಬಂಟ್ವಾಳ : ವಿಶ್ವ ಪರಿಸರ ದಿನದ ಪ್ರಯುಕ್ತ ಬೋಳಿಯಾರ್ ಗ್ರಾಮದ ಜಾರದಗುಡ್ಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಶುಕ್ರವಾರ ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಟ್ಟರು.

ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಿಯಾಝ್ ರಂತಡ್ಕ, ಮುಖ್ಯ ಶಿಕ್ಷಕಿ ಗುಲಾಬಿ, ಸಹ ಶಿಕ್ಷಕರಾದ ಜಾಸ್ಮಿನ್, ಕಿರಣ್ ಗಾಯತ್ರಿ ಭಟ್ ಮೊದಲಾದವರು ಉಪಸ್ಥಿತರಿದ್ದರು.