Thursday, June 26, 2025

ಬೊಳ್ಳಾಯಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಿತ್ತಿಪತ್ರ ಪ್ರದರ್ಶನ

ಬಂಟ್ವಾಳ: ಮಂಗಳೂರು ಪೊಲೀಸ್ ದೌರ್ಜನ್ಯ ಖಂಡಿಸಿ, ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರುದ್ಧ ಬೊಳ್ಳಾಯಿ ಜಮಾಅತ್ ವತಿಯಿಂದ ಭಿತ್ತಿಪತ್ರ ಪ್ರದರ್ಶನ ಹಾಗು ಪ್ರತಿಭಟನಾ ಸಭೆ ಬೊಳ್ಳಾಯಿ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ಶುಕ್ರವಾರ ನಡೆಯಿತು.
ಮಧ್ಯಾಹ್ನ ನಮಾಝ್‌ನ ಬಳಿಕ ಭಿತ್ತಿಪತ್ರ ಪ್ರದರ್ಶನ ಮಾಡುವ ಮೂಲಕ ಪೌರತ್ವ ತಿದ್ದುಪಡಿ ವಿರುದ್ಧ ಪ್ರತಿಭಟನೆ ನಡೆಸಿ, ಸಂವಿಧಾನ ವಿರೋಧಿ ನೀತಿಯ ಬಗ್ಗೆ ಖಂಡಿಸಲಾಯಿತು.
ಮಸೀದಿಯ ಖತೀಬ್ ಅಬ್ಬಸ್ ಸಹದಿ ಅಲ್ ಅಫ್ಲಲಿ ಮಾತನಾಡಿ, ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್  ಸಂವಿಧಾನ ವಿರೋಧಿಯಾಗಿದ್ದು, ಇದರ ವಿರುದ್ಧದ ಕಾನೂನು ಬದ್ಧ ಹೋರಾಟ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಜಮಾತಿನ ಅಧ್ಯಕ್ಷ ಬಿ.ಎಸ್. ಮುಹಮ್ಮದ್, ಜಮಾತಿನ ಸದಸ್ಯರು ಹಾಜರಿದ್ದರು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...