Thursday, June 26, 2025

ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಡಿ.22 ರಿಂದ 26 ರ ವರೆಗೆ ನಡೆಯಲಿರುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ಧಾರ್ಮಿಕ ಶೃದ್ದಾಕೇಂದ್ರಗಳ ಜೀರ್ಣೋದ್ಧಾರಗಳು ನಡೆದಾಗ ಹಿಂದೂಗಳ ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಡಿ.22 ರಿಂದ 26 ರ ವರೆಗೆ ನಡೆಯಲಿರುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶಾಭಿಷೇಕದ ಪೂರ್ವಭಾವಿಯಾಗಿ ಆಮಂತ್ರಣ ಬಿಡುಗಡೆಗೊಳಿಸಿ ಮಾತನಾಡಿದರು.

ಪ್ರತಿಯೊಂದು ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಪ್ರಥಮ ಆಧ್ಯತೆಯಲ್ಲಿ ಒದಗಿಸಲು ಪ್ರಯತ್ನ ಮಾಡುತ್ತೇನೆ.

ಈ ದೇವಾಲಯದ ಬ್ರಹ್ಮಕಲಶ ಕಾರ್ಯಕ್ರಮ ಯಶಸ್ವಿ ಯಾಗಿ ನಡೆಯಲು ಸಮಿತಿ ಜೊತೆ ಊರಪರ ಊರ ಜನರು ಜೊತೆಯಾಗಿ ಕೆಲಸ ಮಾಡಬೇಕು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ಉದ್ಯಮಿ ಮಂಜುನಾಥ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಯರಾಮ ಹೊಳ್ಳ ನಗ್ತಿಮಾರ್, ಉದ್ಯಮಿ ರಘು ಸಪಲ್ಯ ಉದ್ಯಮಿ ಹರೀಶ್ ಶೆಟ್ಟಿ, ಸದಾಶಿವ ಸನಿಲ್, ಉದಯ ಕುಮಾರ್ ರಾವ್ ಬಂಟ್ವಾಳ, ಜನಾರ್ಧನ ಬೊಂಡಾಲ, ವಜ್ರನಾಥ ಕಲ್ಲಡ್ಕ,ಪ್ರಧಾನ ಅರ್ಚಕ ಶಿವಪ್ರಸಾದ್, ವಿನೋದ್ ಶೆಟ್ಟಿ ಬೊಂಡಾಲ ಉಪಸ್ಥಿತರಿದ್ದರು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಪ್ರಸ್ತಾವಿಕವಾಗಿ ಮಾತನಾಡಿದರು.

ನಾಗೇಶ್ ಕಲ್ಲಡ್ಕ ಸ್ವಾಗತಿಸಿ ವಂದಿಸಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...