Sunday, July 13, 2025

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ‘ವಿದ್ಯಾ ಸೇತು’ ಪುಸ್ತಕ ವಿತರಣೆ

ಶ್ರೀ ಶಾರದಾ ಪ್ರೌಢಶಾಲೆ ಪಾಣೆಮಂಗಳೂರು ಇಲ್ಲಿ ಮೊಡಂಕಾಪು ರೋಟರಿ ಕ್ಲಬ್ ಅಧ್ಯಕ್ಷ ಇಲಿಯಾಸ್ ಸಾಂಟಿಸ್ಟ್ ಅವರ ಅನುಪಸ್ಥಿತಿಯಲ್ಲಿ ನಿಯೋಜಿತ ಅಧ್ಯಕ್ಷ ಪ್ರೊಫೆಸರ್ ಡಾಕ್ಟರ್ ಕೆ ಗೋವರ್ಧನ್ ರಾವ್, ಸೆಕ್ರೆಟರಿ ಪಿ ಎ ರಹೀಂ ಹಾಗೂ ಸದಸ್ಯ ಯೂಸುಫ್ ಇವರ ಉಪಸ್ಥಿತಿಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ‘ವಿದ್ಯಾ ಸೇತು’ -ಜ್ಞಾನಾಭಿವೃದ್ಧಿಗೆ ಒಂದು ಕೈಪಿಡಿ ಪುಸ್ತಕವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಈ ಪುಸ್ತಕದ ಪ್ರಯೋಜನವನ್ನು ಪಡೆದುಕೊಂಡು ಮುಂದಿನ ದಿನಗಳಲ್ಲಿ ಭವ್ಯ ಭಾರತದ ಉತ್ತಮ ಪ್ರಜೆಗಳಾಗಿ ಬಾಳಿ ದೇಶಕ್ಕೆ ಹೆಮ್ಮೆ ತರುವ ಕೆಲಸವನ್ನು ಮಾಡಿ ಎಂದು ಶುಭ ಹಾರೈಸಿದ ಪಿ ಎ ರಹಿಂ ಮತ್ತು ಪ್ರೊಫೆಸರ್ ಡಾಕ್ಟರ್ ಕೆ ಗೋವರ್ಧನ್ ರಾವ್ ರವರಿಗೆ ಹಾಗೂ ರೋಟರಿ ಕ್ಲಬ್ ಮೊಡಂಕಾಪುವಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರಿಗೂಶಾರದಾ ಪ್ರೌಢ ಶಾಲಾ ಆಡಳಿತ ಮಂಡಳಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳೆಲ್ಲರ ಪರವಾಗಿ ತುಂಬು ಹೃದಯದ ಧನ್ಯವಾದಗಳು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...