Friday, January 30, 2026

ರಾಜ್ಯದ ಶಾಲಾ ಮಕ್ಕಳಿಗೆ ಸಿಹಿಸುದ್ಧಿ : ಮನೆಗೆ ಪಠ್ಯ ಪುಸ್ತಕ ಪೂರೈಸಲು ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರದ ಹಿನ್ನೆಲೆಯಲ್ಲಿ ಮನೆಯಲ್ಲೇ ಇರುವ ವಿದ್ಯಾರ್ಥಿಗಳ ಸ್ವಯಂ ಅಧ್ಯಯನಕ್ಕೆ ಅನುಕೂಲವಾಗುವಂತೆ ಆಗಸ್ಟ್ ಅಂತ್ಯದೊಳಗೆ ಪಠ್ಯಪುಸ್ತಕ ಪೂರೈಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ.

2021-22 ನೇ ಸಾಲಿನ ಪಠ್ಯಪುಸ್ತಕ ಮುದ್ರಣ ಸಂಬಂಧ ಕರ್ನಾಟಕ ಪಠ್ಯಪುಸ್ತಕ ಸಂಘವು ಎಲ್ಲ ಶಾಲೆಗಳಿಂದ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದು, ಪುಸ್ತಕ ಮುದ್ರಣ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಡೆಂಡರ್ ಪೂರ್ಣಗೊಂಡು ಕಾರ್ಯಾದೇಶ ನೀಡಿದ 100 ದಿನದೊಳಗೆ ಪುಸ್ತಕ ಪೂರೈಕೆಯನ್ನು ಟೆಂಡರ್ ಪಡೆದ ಸಂಸ್ಥೆ ಮುದ್ರಿಸಿ ಕರ್ನಾಟಕ ಪಠ್ಯ ಪುಸ್ತಕ ಸಂಘಕ್ಕೆ ಒದಗಿಸಲಿದೆ ಎನ್ನಲಾಗಿದೆ.

ಬಳಿಕ ಸಂಘದಿಂದ ಶಾಲೆಗಳಿಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ತಲುಪಿಸಲಾಗುತ್ತದೆ. ಶಾಲೆಯ ಮುಖ್ಯ ಶಿಕ್ಷಕರು ಅಥವಾ ಮುಖ್ಯಸ್ಥರು ಮಕ್ಕಳ ಪಾಲಕ, ಪೋಷಕರನ್ನು ಕರೆಸಿ, ಪುಸ್ತಕ ವಿತರಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

More from the blog

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...