Thursday, January 29, 2026

ಬೊರಿಮಾರ್ ಚರ್ಚ್ ಗೆ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೋ ಭೇಟಿ

ಬಂಟ್ವಾಳ: ಶತಮಾನೋತ್ತರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ಬೊರಿಮಾರ್ ಚರ್ಚ್ ಗೆ ಕರ್ನಾಟಕದ ಆರ್ಚ್ ಬಿಷಪ್ ಅತೀ ವಂದನೀಯ ಡಾ| ಪೀಟರ್ ಮಚಾದೊರವರು ಇಂದು ಭೇಟಿ ನೀಡಿ, “ಕಮ್ಯುನಿಯನ್ ಡೇ” ಪವಿತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮಕ್ಕಳಾದ ಐಶಲ್ ಮಾರ್ಟಿಸ್, ಲೆನೊರಾ ಸಾನ್ಸಿಯಾ ಪಿಂಟೊ, ನತಾಶ ಮೆಂಡೊನ್ಸಾ, ಒಲಿಶಾ ನೊರೊನ್ಹಾ, ರಿಯೋನ್ ಪಾವ್ಲ್ ಮಾರ್ಟಿಸ್ ಹಾಗೂ ಶರುನ್ ರೊಡ್ರಿಗಸ್ ರವರಿಗೆ ಪ್ರಪ್ರಥಮ ಬಾರಿಗೆ ಪರಮ ಪ್ರಸಾದ ನೀಡಿ ಹರಸಿದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಡಾ| ಲಾರೆನ್ಸ್ ಮುಕ್ಕುಝಿ, ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಡಾ| ಗೀ ವರ್ಗೀಸ್ ಮಾರ್ ಮಕಾರಿಯೋಸ್ ಸೇರಿದಂತೆ ಮಂಗಳೂರು ಧರ್ಮಪ್ರಾಂತ್ಯದ ವಿವಿಧ ಚರ್ಚ್ ಗಳ ಧರ್ಮಗುರುಗಳು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಆರ್ಚ್ ಬಿಷಪ್ ಅತ್ಯಂತ ಮೇಲು ಹುದ್ದೆಯಾಗಿದ್ದು ಇವರು ಚರ್ಚ್ ಗಳಿಗೆ ಭೇಟಿನೀಡುವುದು ತೀರಾ ಅಪರೂಪವಾಗಿದ್ದು, ಈ ನಿಟ್ಟಿನಲ್ಲಿ ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬೊರಿಮಾರ್ ಚರ್ಚ್ ಗೆ ಆರ್ಚ್ ಬಿಷಪ್ ಡಾ| ಮಚಾದೊರವರು ಭೇಟಿ ನೀಡುತ್ತಿರುವುದು ಐತಿಹಾಸಿಕ ದಾಖಲೆ ನಿರ್ಮಿಸಿದೆ. ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂದನೀಯ ಗ್ರೆಗರಿ ಪಿರೇರಾ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...