Tuesday, January 27, 2026

ಬೊರಿಮಾರ್ ಚರ್ಚ್ ನಲ್ಲಿ “ಲಾವ್ದಾತೊ ಸಿ” ಪರಿಸರ ದಿನಾಚರಣೆ

ಬಂಟ್ವಾಳ: ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬೊರಿಮಾರ್ ಚರ್ಚಿನಲ್ಲಿ “ಲಾವ್ದಾತೊ ಸಿ” ಪರಿಸರ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು. ಪೋಪ್ ಫ್ರಾನ್ಸಿಸ್ ಮತ್ತು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನರವರ ಮಾರ್ಗದರ್ಶನದಂತೆ ನಡೆದ ಕಾರ್ಯಕ್ರಮವನ್ನು ಬೊರಿಮಾರ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ ರವರು, ಚರ್ಚ್ ನ ಧರ್ಮಗುರು ವಂದನೀಯ ಗ್ರೆಗರಿ ಪಿರೇರಾ ರವರಿಗೆ ಗಿಡವನ್ನು ವಿತರಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಧರ್ಮಗುರು ವಂ.ಗ್ರೆಗರಿ ಪಿರೇರಾ ರವರು, ಪ್ರತಿಯೊಬ್ಬರೂ ಪರಿಸರವನ್ನು ಪ್ರೀತಿಸಬೇಕು, ಗಿಡಗಳನ್ನು ನೆಟ್ಟು, ಪ್ರೀತಿಸಿ, ಬೆಳೆಸುವುದರಲ್ಲಿ ದೇವರನ್ನು ಕಾಣುತ್ತೇವೆ, ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ ಎಂದವರು ಕರೆ ನೀಡಿದರು.
ತಾನು ಸ್ವೀಕರಿಸಿದ ಗಿಡವನ್ನು ಚರ್ಚ್ ಆವರಣದಲ್ಲಿ ನೆಟ್ಟು ಅದನ್ನು ರಕ್ಷಿಸಿ, ಪೋಷಿಸುವಂತೆ ಮಕ್ಕಳಲ್ಲಿ ಮನವಿ ಮಾಡಿದರು. ಕಾರ್ಯದರ್ಶಿ ಪ್ರೀತಿ ಲ್ಯಾನ್ಸಿ ಪಿರೇರಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಚರ್ಚ್ ವ್ಯಾಪ್ತಿಯ ಕ್ರೈಸ್ತ ಬಾಂಧವರಿಗೆ ಸುಮಾರು ಐನೂರಕ್ಕೂ ಅಧಿಕ ಗಿಡಗಳನ್ನು ವಿತರಿಸಿ, ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

More from the blog

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...