Wednesday, January 28, 2026

ಮುಖ್ಯಮಂತ್ರಿ ಗೃಹ ಕಚೇರಿಯ ಕೆಲ ಸಿಬ್ಬಂದಿಗಳಿಗೂ ಕೊರೊನಾ: ಬಿ.ಎಸ್‌.ವೈ. ಸೆಲ್ಫ್‌ ಕ್ವಾರಂಟೈನ್‌‌

ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗಳಿಗೆ ಕೊರೊನಾ ದೃಢಪಟ್ಟಿರುವ ಕಾರಣ ಇಂದಿನಿಂದ ಕೆಲವು ದಿನಗಳ ಕಾಲ ತಾನು ತನ್ನ ಮನೆಯಿಂದಲೇ ಕಾರ್ಯಗಳನ್ನು ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಬಿಎಸ್‌ವೈ ಅವರು ತಿಳಿಸಿದ್ದಾರೆ.

ಈ ಬಗ್ಗೆ ತಿಳಿಸಿರುವ ಅವರು, ಅಗತ್ಯವಾದ ಸಲಹೆ ಸೂಚನೆಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ನೀಡಲಿದ್ದೇನೆ. ಯಾರೂ ಈ ಬಗ್ಗೆ ಭಯ ಬೀಳುವ ಅವಶ್ಯಕತೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಕೊರೊನಾ ನಿಯಂತ್ರಣಕ್ಕಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಾರೆ.

ಮೂಲಗಳ ಪ್ರಕಾರ ಸಿಎಂ ಅವರ ಗೃಹ ಕಚೇರಿಯ ದೂರವಾಣಿ ಆಪರೇಟರ್‌‌, ಇಬ್ಬರು ಎಸ್ಕಾರ್ಟ್‌‌, ಅಡುಗೆಯವರು ಸೇರಿದಂತೆ ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್‌‌‌‌ ದೃಢಪಟ್ಟಿದ್ದು, ಸುಮಾರು ಹತ್ತು ಮಂದಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಇದೆ. ಕೊರೊನಾ ಪಾಸಿಟಿವ್‌‌ ಹಿನ್ನೆಲೆ ಕೃಷ್ಣಾ ಹಾಗೂ ಕಾವೇರಿ ನಿವಾಸಗಳನ್ನು ಸ್ಯಾನಿಟೈಸ್‌ ಮಾಡಲಾಗಿದೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...