ಬಂಟ್ವಾಳ : ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಆತ್ಮಹತ್ಯಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಆತ್ಮಕ್ಕೆ ಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ಆಗಿರುವ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಸಂಸ್ಥೆಯ ಸಂಚಾಲಕರಾದ ಶೇಕ್ ರಹ್ಮತ್ತುಲ್ಲಾ, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಸೇರಿ ಎರಡು ನಿಮಿಷಗಳ ಮೌನ ಪ್ರಾರ್ಥನೆಯನ್ನು ಬುರೂಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಝಾನಗರ ಮೂಡುಪಡುಕೋಡಿಯಲ್ಲಿ ನಡೆಸಲಾಯಿತು.

