Tuesday, July 1, 2025

ಡಿ. 31ರಂದು ಬುರೂಜ್ : 19ನೇ ವಾರ್ಷಿಕೋತ್ಸವ ಸಂಭ್ರಮ

ಬಂಟ್ವಾಳ : ಬುರೂಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಝಾನಗರ ಬಂಟ್ವಾಳ ದ.ಕ. ಇದರ 19ನೇ ವಾರ್ಷಿಕೋತ್ಸವವು ಡಿ. 31ರಂದು ಗಂಟೆ ೧೦.೦೦ಕ್ಕೆ ಬಿ. ರಮಾನಾಥ ರೈ ಮಾಜಿ ಅರಣ್ಯ ಪರಿಸರ ಜೀವಿಶಾಸ್ತ್ರ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆಗೊಳ್ಳಲಿರುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜೇಶ್ ನಾಯಕ್ ಯು. ಎಮ್.ಎಲ್.ಎ ಬಂಟ್ವಾಳ ಇವರು ವಹಿಸಲಿದ್ದಾರೆ. ಅದೇ ದಿನ ಗಂಟೆ 9ಕ್ಕೆ ಸರಿಯಾಗಿ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮವಿದ್ದು, ಈ ಕಾರ್ಯಕ್ರಮವು ಡಾ| ಸತೀಶ್ ಎಮ್.ಸಿ. ವೈದ್ಯಾಧಿಕಾರಿಗಳು ಪ್ರಾ. ಆ. ಕೇಂದ್ರ ಪುಂಜಾಲಕಟ್ಟೆ ಇವರಿಂದ ಉದ್ಘಾಟನೆಗೊಳ್ಳಲಿದೆ. ಸಮಾರಂಭದಲ್ಲಿ ಸೌಮ್ಯ ಜಿ. ಸಬ್ ಇನ್ಸ್ಪೆಕ್ಟರ್ ಪುಂಜಾಲಕಟ್ಟೆ ಇವರಿಂದ ದಿಕ್ಸೂಚಿ ಭಾಷಣವಿರುವುದು. ವಾರ್ಷಿಕೋತ್ಸವ ಸಮಾರಂಭಕ್ಕೆ ತಮ್ಮೆಲ್ಲರನ್ನು ಆತ್ಮೀಯವಾಗಿ ಆದರದಿಂದ ಸಂಸ್ಥೆಯ ಸಂಚಾಲಕರು ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿ ವೃಂದವು ಸ್ವಾಗತಿಸುತ್ತದೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...