Friday, January 30, 2026

ಕಟೀಲು ದೇವಸ್ಥಾನದ ಎದುರು ಹೊತ್ತಿ ಉರಿದ ಬಸ್

ಕಟೀಲು: ಕಟೀಲು ದೇವಸ್ಥಾನದ ಮುಂದೆ ಎಂಆರ್‌ಪಿಎಲ್ ಕಂಪನಿಗೆ ಸೇರಿದ ಬಸ್ ಏಕಾಏಕಿ ಹೊತ್ತಿ ಉರಿದಿದ್ದು, ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶ ಪಾರಾಗಿರುವ ಘಟನೆ ನಡೆದಿದೆ.

ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಹೊತ್ತಿ ಉರಿದಿದೆ.ಕೂಡಲೇ ಸ್ಥಳೀಯವಾಗಿ ನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ.

ಕಟೀಲು ರೂಟ್ ನಲ್ಲಿ ಚಲಿಸುವ ಓಎಂಪಿಎಲ್ ಕಂಪನಿಯ ಈ ಬಸ್ ಕಡೆಯ ನೌಕರನ್ನು ಬಿಟ್ಟು ವಾಪಸ್ಸಾಗುವ ಈ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದಾರೆಂದು ತಿಳಿದು ಬಂದಿದ್ದು, ಬೆಂಕಿ ತಗಲಿದ ಕೂಡಲೇ ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಬಸ್ಸಿನಿಂದ ಜಿಗಿದು ಪವಾಡ ಸದೃಶ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...