Thursday, June 26, 2025

ಮಂಗಳೂರಿನಿಂದ ಹೈದಾರಾಬಾದ್‌ ಗೆ ಅಂಬಾರಿ ಡ್ರೀಮ್ ಕ್ಲಾಸ್ ಬಸ್ಸುಗಳಿಗೆ ಚಾಲನೆ

ಮಂಗಳೂರು : ಕೆಎಸ್‌ಆರ್‌ಟಿಸಿ ಮಂಗಳೂರಿನಿಂದ ಹೈದಾರಾಬಾದ್‌ ಪ್ರಯಾಣಕ್ಕೆ ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಆಯಕ್ಸಿಲ್ ಎಸಿ ಸ್ಲೀಪರ್ ಕ್ಲಾಸ್ ಎರಡು ಬಸ್ಸುಗಳಿಗೆ ಸೋಮವಾರ ಚಾಲನೆ ನೀಡಿದರು.

ಅಂಬಾರಿ ಡ್ರೀಮ್ ಕ್ಲಾಸ್, ರಾಜಹಂಸ, ವೋಲ್ವೋ ಸೇರಿದಂತೆ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗಕ್ಕೆ ಮಾರ್ಚ್‌ನೊಳಗೆ ಮತ್ತೆ 50 ಹೊಸ ಬಸ್ಸುಗಳ ಸೇರ್ಪಡೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಇಂದು ಪ್ರಯಾಣ ಆರಂಭಿಸಿರುವ ಎರಡು ಅಂಬಾರಿ ಡ್ರೀಮ್‌ಕ್ಲಾಸ್ ಮಲ್ಟಿ ಆಯಕ್ಸಿಲ್ ಎಸಿ ಸ್ಲೀಪರ್ ಬಸ್ಸುಗಳಿಂದ ಮಂಗಳೂರಿ ನಿಂದ ಹೈದರಾಬಾದ್ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಮುಂದೆ ಸೇರ್ಪಡೆಗೊಳ್ಳಲಿರುವ ಇನ್ನೆರಡು ಹೊಸ ಅಂಬಾರಿ ಡ್ರೀಮ್ ಕ್ಲಾಸ್ ಮಂಗಳೂರಿನಿಂದ ಅಂತಾರಾಜ್ಯ ಪ್ರಯಾಣವನ್ನು ಇನ್ನಷ್ಟೇ ನಿಗದಿಪಡಿಸೇಕಾಗಿದೆ ಎಂದು ಅವರು ಹೇಳಿದರು.

ಶಾಸಕ ವೇದವ್ಯಾಸ ಕಾಮತ್, ಕೆಎಆಸ್‌ಆರ್‌ಟಿಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣಾ ಎಸ್.ಎನ್, ವಿಭಾಗೀಯ ಸಂಚಾರಾಧಿಕಾರಿ (ಪ್ರಭಾರ) ಇಸ್ಮಾಯಿಲ್ ಮೊದಲಾದವರು ಉಪಸ್ಥಿತರಿದ್ದರು.

ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಆಯಕ್ಸಿಲ್ ಎಸಿ ಸ್ಲೀಪರ್ ಬಸ್ಸಿನಲ್ಲಿ ಆರಾಮದಾಯಕ ಪ್ರಯಾಣಕ್ಕಾಗಿ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್, ಸುಲಭ ಚಾಲನೆಗಾಗಿ ವಿದ್ಯುನ್ಮಾನ ನಿಯಂತ್ರಿತ ಸಸ್ಪೆನ್ಷನ್ಸ್, ಪ್ರತ್ಯೇಕ ಮೊಬೈಲ್ ಚಾರ್ಜಿಂಗ್ ಪಾಯಿಂಟ್ಸ್, ನೀರಿನ ಬಾಟಲಿಗಾಗಿ ಸ್ಥಳ, ವಿಹಂಗಮ ನೋಟಕ್ಕಾಗಿ ವಿಶಾಲವಾದ ಕಿಟಕಿಗಳು, ಮೇಲ್ಛಾವಣಿ ಕಿಟಕಿ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ತುರ್ತು ನಿರ್ಗಮನ ಬಾಗಿಲುಗಳು ಇರುತ್ತದೆ.

ಮಂಗಳೂರಿನಿಂದ ಹೈದಾರಾಬಾದ್‌ಗೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ 1400 ರೂ. ನಿಗದಿ ಪಡಿಸಲಾಗಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...