Friday, January 30, 2026

ಮೇ 9ರಂದು ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನಲ್ಲಿ ರಕ್ತದಾನ ಶಿಬಿರ: ರಮಾನಾಥ ರೈ

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಮತ್ತು ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್, ಬಂಟ್ವಾಳ ಮತ್ತು ಪಾಣೆಮಂಗಳೂರು ಯುವ ಕಾಂಗ್ರೆಸ್ ನ ಆಶ್ರಯದಲ್ಲಿ ಮೇ 9ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಕೊರೋನ ನಿಯಂತ್ರಣಕ್ಕೆ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು ಸರಕಾರ ಚಿಂತಿಸಿರುವ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಲಸಿಕೆ ಪಡೆದ ವ್ಯಕ್ತಿ ಮುಂದಿನ 60 ದಿನಗಳ‌ ಕಾಲ ರಕ್ತದಾನ ಮಾಡುವುದು ನಿಷಿದ್ಧವಾಗಿರುವುದರಿಂದ ಹಾಗೂ ಕೋವಿಡ್ ಸಮಯದಲ್ಲಿ ರಕ್ತದ ತುರ್ತು ಅಗತ್ಯ ಬರಬಹುದಾದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಮಾನಾಥ ರೈ ಹೇಳಿದ್ದಾರೆ.

ಶಿಬಿರದಲ್ಲಿ ಭಾಗವಹಿಸುವ ರಕ್ತದಾನಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸಹಿತ ಕೋವಿಡ್ ನ ಎಲ್ಲಾ ನಿಯಮಗಳನ್ನು ಪಾಲಿಸಬೇಕು. ಕಾಂಗ್ರೆಸ್ ನ ಎಲ್ಲಾ ಕಾರ್ಯಕರ್ತರು ಶಿಬಿರದಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಬಿ‌.ರಮಾನಾಥ ರೈ ಕೋರಿದ್ದಾರೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...