Tuesday, January 27, 2026

ಬಿ.ಸಿ.ರೋಡಿನಲ್ಲಿ ಚೆಕ್ ಪೋಸ್ಟ್ ರಚಿಸಿ ಪೊಲೀಸರ ಬಿಗಿ ತಪಾಸಣೆ; ಕರ್ಫೂ ಉಲ್ಲಂಘಿಸಿದ ವಾಹನ ಮಾಲಕರಿಗೆ ದಂಢ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕು ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಕರ್ಫ್ಯೂ ಅನ್ನು ಇನ್ನಷ್ಟು ಬಿಗಿಗೊಳಿಸಿರುವ ಬಂಟ್ವಾಳ ಪೊಲೀಸರು ಬಿ.ಸಿ.ರೋಡಿನಲ್ಲಿ ಚೆಕ್ ಪೋಸ್ಟ್ ರಚಿಸಿ ವಾಹನಗಳ ತಪಾಸಣೆ ಕಾರ್ಯಕ್ಕೆ ಗುರುವಾರ ಚಾಲನೆ ನೀಡಿದ್ದಾರೆ.

ಬೆಳಗ್ಗೆ 10 ಗಂಟೆಯ ಬಳಿಕ ಕೋವಿಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಅಗತ್ಯ ಕಾರ್ಯಕ್ಕೆ ತೆರಳುವವರ ಯಾವುದೇ ಅಡ್ಡಿ ಇರಲಿಲ್ಲ. ಆದರೆ ಇದರ ಜೊತೆ ಹಲವರು ಅನಗತ್ಯವಾಗಿ ಸಂಚಾರಿಸುತ್ತಿರುವುದು ಪೊಲೀಸರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಗುರುವಾರದಿಂದ ವಾಹನಗಳ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ.

ಬಿ.ಸಿ.ರೋಡ್ ಮತ್ತು ಕೈಕಂಬದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ವಾಹನಗಳ ತಪಾಸಣೆ ಕಾರ್ಯ ನಡೆಸುತ್ತಿರುವ ಪೊಲೀಸರು ಹಲವು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಇನ್ನು ಹಲವು ವಾಹನಗಳ ಮಾಲಕರಿಗೆ ದಂಡ ವಿಧಿಸಿದ್ದಾರೆ.

ಬಂಟ್ವಾಳ ನಗರ ಠಾಣೆಯ ಇನ್ ಸ್ಟೆಕ್ಟರ್ ಚೆಲುವರಾಜ್ ನೇತೃತ್ವದಲ್ಲಿ ತಪಾಸಣೆ ಕಾರ್ಯ ನಡೆಯುತ್ತಿದ್ದು ಬಿ.ಸಿ.ರೋಡ್, ಕೈಕಂಬದ ಪರಿಸರದಲ್ಲಿ ಮೂರು ಚೆಕ್ ಪೋಸ್ಟ್ ರಚಿಸಲಾಗಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...