Tuesday, February 3, 2026

ನಾಳೆಯಿಂದ ಕರ್ಫೂ ಮತ್ತಷ್ಟು ಟಫ್

ಬಂಟ್ವಾಳ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಫ್ ರೂಲ್ಸ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಗುರುವಾರ ಆದೇಶ ಹೊರಡಿಸಿದ್ದಾರೆ.

ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮೇ 7ರಿಂದ ಬೆಳಗ್ಗೆ 6ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. 10 ಗಂಟೆಯ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು‌ ಎಂದು ಹೇಳಿದ್ದಾರೆ.

ವಾಹನಗಳಲ್ಲಿ ಬೇರೆ ಕಡೆ ಹೋದವರ ವಾಹನ ಸೀಝ್ ಮಾಡುವಂತೆ ಪೊಲೀಸರಿಗೆ ಸೂಚಿಸಿರುವ ಜಿಲ್ಲಾಧಿಕಾರಿ, ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ ನೀಡಿದ್ದಾರೆ.

ಮೇ 15ರ ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶ ಇಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ. ಮೇ 15ರ ಮೇಲೆ ಅನುಮತಿ ನೀಡಿರುವ ಎಲ್ಲಾ ರೀತಿಯ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಾಗಿದೆ. ಕಾರ್ಯಕ್ರಮದ‌ ದಿನಾಂಕ ನಿಗದಿ ಪಡಿಸಿದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...