Monday, February 2, 2026

ಕೊರೋನ ದೈನಂದಿನ ಪಾಸಿಟಿವ್, ಸಾವು ಪ್ರಕರಣದ ಅಪ್ ಡೇಟ್

ದೆಹಲಿ: ದೇಶದಲ್ಲಿ ಮೇ 7ರಂದು ಶುಕ್ರವಾರ ಒಂದೇ ದಿನ 4,01,522 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಹಾಗೆಯೇ ಭಾರತದಲ್ಲಿ ನಿನ್ನೆ ಒಂದೇ ದಿನ 4,187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಭಾರತೀಯ ಆರೋಗ್ಯ ಇಲಾಖೆ ತಿಳಿಸಿದೆ.

ವಿಶ್ವದಲ್ಲಿ ಅತ್ಯಧಿಕ ಎಂದರೆ ಒಂದೇ ದಿನ ಕೊರೋನದಿಂದ 4,490 ಸಾವು ಅಮೆರಿಕದಲ್ಲಿ ದಾಖಲಾಗಿತ್ತು. ಬ್ರೆಝಿಲ್ ಮತ್ತು ಅಮೆರಿಕವನ್ನು ಹೊರತುಪಡಿಸಿದರೆ ಒಂದೇ ದಿನ ಅತ್ಯಧಿಕ ಸಾವು ಸಂಭವಿಸಿದ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿ ಇದೆ.

ಭಾರತದಲ್ಲಿ ಕೊರೊನಾ ಮೊದಲ ಅಲೆಯಲ್ಲಿ 2020ರ ಜನವರಿ 30ರಿಂದ 2021ರ ಫೆಬ್ರವರಿ 14ರವರೆಗೆ ಒಟ್ಟು 1,09,16,481 ಪ್ರಕರಣಗಳು ವರದಿಯಾಗಿದ್ದವು. ಆದರೆ ಎರಡನೇ ಅಲೆಯಲ್ಲಿ ಫೆಬ್ರುವರಿ 14ರ ಬಳಿಕ 82 ದಿನಗಳಲ್ಲಿ 1,09,69,039 ಪ್ರಕರಣಗಳು ದೃಢಪಟ್ಟಿವೆ.

ಭಾರತದಲ್ಲಿ ಇದುವರೆಗೆ ಒಟ್ಟು 2,38,197 ಮಂದಿ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ. ಕರ್ನಾಟಕದಲ್ಲಿ ಇದುವರೆಗಿನ ಗರಿಷ್ಠ ಅಂದರೆ 592 ಮಂದಿ ಒಂದೇ ದಿನ ವೈರಸ್‌ಗೆ ಬಲಿಯಾಗಿದ್ದಾರೆ.

ಹಾಗೆಯೇ ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನದಿಂದ 592 ಮಂದಿ ಸಾವನ್ನಪ್ಪಿದ್ದಾರೆ. 48,781 ಹೊಸ ಪ್ರಕರಣಗಳು ದೃಢಪಟ್ಟಿದ್ದು 28,623 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 5,36,641 ಸಕ್ರಿಯ ಪ್ರಕರಣಗಳಿವೆ.

More from the blog

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...