ಬೆಂಗಳೂರು: ಮಹಾ ಮಾರಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಮೇ 12ರ ವರೆಗೆ 14 ದಿನಗಳ ಕೋವಿಡ್ ಕರ್ಪ್ಯೂ ಜಾರಿ ಮಾಡಿದ್ದು ವೈರಸ್ ಹತೋಟಿಗೆ ಬರದಿದ್ದರೆ ಮತ್ತೆ ಕೋವಿಡ್ ಕರ್ಫ್ಯೂ ಮುಂದುವರಿಸುವ ಸೂಚನೆ ದೊರೆತಿದೆ.


ಕರ್ಫ್ಯೂ ಮುಂದುವರಿಸುವ ಬಗ್ಗೆ ಮಾಹಿತಿ ನೀಡಿರುವ ಸಚಿವ ಆರ್.ಅಶೋಕ್, ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. 14 ದಿನಗಳ ಜನತಾ ಕರ್ಪ್ಯೂ ಅವಧಿಯಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಇದ್ದರೆ ಜನತಾ ಕರ್ಪ್ಯೂ ಮತ್ತೆ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದಿದ್ದಾರೆ.
ಕರ್ಪ್ಯೂ ಮುಂದುವರಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನ ಕೈಗೊಳ್ಳುತ್ತಾರೆ. ಯಾವುದಕ್ಕೂ 14 ದಿನಗಳ ಕೋವಿಡ್ ಕರ್ಫ್ಯೂ ಸಮಯದಲ್ಲಿ ಕೋರೋನದ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.












