Thursday, July 3, 2025

ಕುಡಿಯುವ ನೀರಿನ ಸಮಸ್ಯೆಗೆ ಮೊದಲ ಆದ್ಯತೆ ನೀಡಿ : ಪಿಡಿಒಗಳಿಗೆ ಜಿ.ಪಂ.ಸಿ.ಒ.ಖಡಕ್ ಆದೇಶ

ಬಂಟ್ವಾಳ: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ಪ್ರಥಮ ಆದ್ಯತೆಯ ಲ್ಲಿ ಕೆಲಸ ಮಾಡಲು ಜಿ.ಪಂ.ಸಿ.ಒ.ಡಾ!ಸೆಲ್ವಮಣಿ ಸೂಚನೆ ನೀಡಿದ್ದಾರೆ.
ಅವರು ಬಂಟ್ವಾಳ ತಾಪಂ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ತಾಲೂಕು ಮಟ್ಟದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಇಲಾಖಾಧಿಕಾರಿಗಳ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆನೀಡಿದರು  .

ಟಾಸ್ಕ್ ಫೋರ್ಸ್ ನಲ್ಲಿ ಅನುದಾನಗಳು ಬಂದ ಕಡೆಗಳಲ್ಲಿ ಬೇಡಿಕೆ ಬದ್ದವಾಗಿ ಹೊಸ ಬೋರ್ ವೆಲ್ , ಹಳೆಯ ಬೋರ್ ವೆಲ್ ಗಳ ಆಳ ಮಾಡುವುದು ಹಾಗೂ ಹಳೆಯ ಬೋರ್ ವೆಲ್ ಗಳ ಕೆಸರು ತೆಗೆಯುವ ಕೆಲಸ ಗಳು ಇದ್ದಲ್ಲಿ ತುರ್ತಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈಗಾಗಲೇ ಪೂರ್ವಯೋಜಿತ ಕಾಮಗಾರಿಗಳ ಬಗ್ಗೆ ರೂಪುರೇಷೆ ಗಳು ತಯಾರಾಗಿದ್ದು 31 ಕಾಮಗಾರಿಗಳು ನಡೆಯುತ್ತಿದೆ. ಇನ್ನು ಹೆಚ್ಚಿನ ಹಣ ಬೇಕಾದಲ್ಲಿ ಇನ್ನಷ್ಟು ಹಣ ನೀಡಲು ಸರಕಾರ ರೆಡಿಯಾಗಿದೆ ಎಂದು ಅವರು ತಿಳಿಸಿದರು.

ತುರ್ತು ಕುಡಿಯುವ ನೀರಿನ ಸಮಸ್ಯೆ ತಾಲೂಕಿನ ಎಲ್ಲೆಲ್ಲಿ ಇದೆಯೋ ಅವುಗಳ ಬಗ್ಗೆ ಗರಿಷ್ಠ ಆದ್ಯತೆ ನೀಡಿ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್. ಹೇಳಿದ್ದಾರೆ.
ಸರಕಾರಿ ಬೋರುವೆಲ್ ಗಳಲ್ಲಿ ನೀರು ಇಲ್ಲದ ಕಡೆಗಳಲ್ಲಿ ಖಾಸಗಿ ಬೋರ್ ವೆಲ್ ಗಳ ನೀರು ಪಡೆದು ಸಮಸ್ಯೆ ಯಿರುವ ಕಡೆಗಳಿಗೆ ಟ್ಯಾಂಕ್ ರ್ ಮೂಲಕ ಅಥವಾ ಬೇರೆ ಮೂಲಗಳ ಮೂಲಕ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಲ್ಲದೇ ಬಹುತೇಕ ಕಡೆಗಳಲ್ಲಿ ಈ ಕೆಲಸ ನಡೆಯುತ್ತಿದೆ.
ನೀರು ಕೊಡುವ ಖಾಸಗಿ ಬೋರ್ ವೆಲ್ ಗಳ ಮಾಲೀಕರಿಗೆ ಇಲಾಖೆ ಅದರ ಮೌಲ್ಯ ನೀಡಿ ಪಡೆಯುತ್ತದೆ ಎಂದು ಅವರು ಹೇಳಿದರು.

ಸಮಸ್ಯೆಗೆ ಸ್ಪಂದಿಸಿ:

ಆದ್ಯತೆ ಮೇರೆಗೆ ಎಲ್ಲೆಲ್ಲಿ ಸಮಸ್ಯೆ ಇದೆಯೋ ಅಲ್ಲಿ ಒದಗಿಸುವ ಕಾರ್ಯ ನಡೆಸಿ, ಜೂನ್ ೧ರಂದು ಮಳೆ ಶುರುವಾಗುವ ಮೊದಲು ಸಿದ್ಧತೆಗಳನ್ನೂ ನಡೆಸಬೇಕು. ಯಾವುದೇ ದೂರುಗಳು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಪಂಚಾಯತ್‌ಗೆ ಮೂರು ವೆಂಟೆಡ್ ಡ್ಯಾಂ
ಪ್ರತಿಯೊಂದು ಬೋರ್ ವೆಲ್ ರೀಚಾರ್ಜ್ ಆಗಬೇಕು, ಪ್ರತಿಯೊಂದು ಪಂಚಾಯತ್ ನಲ್ಲಿ ವೆಂಟೆಡ್ ಡ್ಯಾಂ ಕನಿಷ್ಠ ಮೂರು ನಿರ್ಮಾಣವಾಗುವಂತೆ ಪಿಡಿಒಗಳು ಆಸ್ಥೆ ವಹಿಸಬೇಕು. ವಾರದೊಳಗೆ ಪ್ರತಿ ಪಂಚಾಯತ್ ಗಳ ಪಿಡಿಒಗಳು ೧೦ ಹೊಸ ಕೆಲಸಗಳನ್ನು ಗುರುತಿಸಿ ಈ ಕುರಿತು ಕಾರ್ಯಪ್ರವೃತ್ತರಾಗಬೇಕು ಎಂದು ಸೆಲ್ವಮಣಿ ಚುರುಕು ಮುಟ್ಟಿಸಿದರು.

More from the blog

Mangalore : ಹಬ್ಬಗಳ ಋತು ಆರಂಭ – ಆಚರಣೆಗೆ ಷರತ್ತು ವಿಧಿಸಿದ ಪೊಲೀಸ್ ಇಲಾಖೆ..

ಕೆಲವೇ ದಿನಗಳಲ್ಲಿ ಹಬ್ಬಗಳ ಋತು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮುಹರ್ರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ , ಗಣೇಶ ಚತುರ್ಥಿ,...

ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಧೆಕಾರು ಲೀಲಾ ಕೃಷ್ಣಪ್ಪ ಇವರ ಮಗನಾಧ ಹರೀಶ್ ಇವರು ಅನಾರೋಗ್ಯದಿಂದ ಬಳಲುತ್ತಿದ್ದು. ಇವರ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್...

ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಕ್ರಮ ಖಂಡಿಸಿ ಪ್ರತಿಭಟನೆಗೆ ಕರೆ 

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ 2 ತಿಂಗಳುಗಳಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆಯು ಕಾನೂನು ವಿರೋಧಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ...

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣ : ಆರೋಪಿ ಬಂಧನ..

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವೆನೆ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲೀಸ್ ಸಿಬ್ಬಂದಿ ಮೇಲೆ ಅರೋಪಿಯೋರ್ವ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ...