Thursday, February 13, 2025

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವಗಳ ಪತ್ತೆ ಪ್ರಕರಣ : ರಹಸ್ಯ ಬಯಲು… 6 ಮಂದಿ ವಶಕ್ಕೆ

ಬೆಳ್ತಂಗಡಿ: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣ ರಹಸ್ಯ ಬಯಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ತುಮಕೂರಿಗೆ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್, ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್, ಶಿರ್ಲಾಲು ಗ್ರಾಮದ ಸಿದ್ದಿಕ್ ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು. ಆದರೆ ಬಳಿಕ ಸುಟ್ಟ ಕಾರಿನಲ್ಲಿ ಇವರ ಮೃತದೇಹ ಪತ್ತೆಯಾಗಿತ್ತು.

ಮೃತಪಟ್ಟ ಮೂವರು “ನಕಲಿ ಚಿನ್ನದ ದಂಧೆ”ಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ಆರೋಪಿಗಳು, ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಬೆಲೆಗೆ ಬಂಗಾರ ಮಾರಾಟ ಮಾಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಅವರಲ್ಲಿದ್ದ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಈ ಪ್ರಕರಣ ಪ್ರಮುಖ ಆರೋಪಿ ತುಮಕೂರಿನ ಸ್ವಾಮಿ ಸೇರಿ ಆರು ಮಂದಿಯನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...