Thursday, June 26, 2025

ಶೀಘ್ರದಲ್ಲೇ ಶಾಲೆ ಪ್ರಾರಂಭಿಸಿ ಕಾರ್ಡ್ ಅಭಿಯಾನ

ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶೀಘ್ರ ಶಾಲೆ ಆರಂಭಿಸುವಂತೆ ಆಗ್ರಹಿಸಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಡ್ ಅಭಿಯಾನಕ್ಕೆ ಗುರುವಾರ ದಡ್ಡಲಕಾಡು ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಲಾಯಿತು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಅಭಿಯಾನದಂಗವಾಗಿ ಒಂದು ಸಾವಿರಕ್ಕಿಂತಲೂ ಅಧಿಕ ಮಂದಿ ಪೋಷಕರು ಸ್ವಯಂ ಪ್ರೇರಿತರಾಗಿ ಕಾರ್ಡ್ ಪೋಸ್ಟ್ ಮಾಡುವ ಮೂಲಕ ಅಭಿಯಾನದಲ್ಲಿ ಕೈ ಜೋಡಿಸಿದರು.

ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ ಆನ್ ಲೈನ್ ಹಾಗೂ ವಿದ್ಯಾಗಮ ಶಿಕ್ಷಣ ವ್ಯವಸ್ಥೆಯನ್ನು ಅವಲಂಭಿಸುವ ಬದಲು ಮುಖಾಮುಖಿ ಶಿಕ್ಷಣಕ್ಕೆ ಆದ್ಯತೆ ಕೊಟ್ಟು ಶೀಘ್ರ ಶಾಲೆ ಆರಂಭಿಸುವಂತೆ ಪೋಷಕರ ಒತ್ತಾಯಗಳು ಕೇಳಿ ಬಂದ ಹಿನ್ನಲೆಯಲ್ಲಿ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಜುಲೈ 21 ರ ಒಳಗಾಗಿ ಶಾಲೆ ಆರಂಭಿಸುವಂತೆ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸಹಿತ ಜನಪ್ರತಿನಿಧಿಗಳಿಗೆ ಈಗಾಗಲೇ ಮನವಿಯನ್ನು ಸಲ್ಲಿಸಲಾಗಿದೆ. ಮಕ್ಕಳ ಸುರಕ್ಷತೆ ಹಾಗೂ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆ ಆರಂಭಿಸುವಂತೆ ಆಗ್ರಹಿಸುವ ಪೋಷಕರು ಕಾರ್ಡ್ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದ ಅವರು ತಮ್ಮ ತಮ್ಮ ಮನೆಯಿಂದಲೇ ಶಿಕ್ಷಣ ಸಚಿವರಿಗೆ ಕಾರ್ಡ್ ಬರೆಯುವಂತೆ ಮನವಿ ಮಾಡಿದರು.

ಈ ಸಂದರ್ಭ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಕಾರ್ಯದರ್ಶಿ ಪುರುಷೋತ್ತಮ ಅಂಚನ್, ಸದಸ್ಯ ರಾಮಚಂದ್ರ ಪೂಜಾರಿ ಕರೆಂಕಿ ಮತ್ತಿತರರು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...