Thursday, June 26, 2025

ಕಾರ್ಮೆಲ್ ಶಾಲೆಯಲ್ಲಿ ’ಸೈನ್ಸ್ ಆನ್ ವೀಲ್ ’

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಆರ್ಯಭಟ ಸಂಸ್ಥೆ ಬೆಂಗಳೂರು ಇವರ ಸಹಯೋಗದಿಂದ ಕಾರ್ಮೆಲ್ ಪ್ರೌಢಶಾಲೆ ಮೊಡಂಕಾಪು ಇಲ್ಲಿ ’ಸೈನ್ಸ್ ಆನ್ ವೀಲ್’ ಕಾರ್ಯಕ್ರಮವನ್ನು ನವೆಂಬರ್ 5 ರಂದು ಆಯೋಜಿಸಲಾಯಿತು.

ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷರಾದ ಮಂಜುನಾಥ್ ಆಚಾರ್‍ಯ ಮಾತನಾಡಿ ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಆಸಕ್ತಿ ಮೂಡಿಸಲು, ಪಾಠಗಳಲ್ಲಿ ಪ್ರಯೋಗಗಳನ್ನು ಸ್ವತಃ ವಿದ್ಯಾರ್ಥಿಗಳು ಮಾಡಿ ತಿಳಿದಾಗ ವಿಜ್ಞಾನ ಪರಿಕಲ್ಪನೆ ಅರ್ಥೈಸಿಕೊಳ್ಳಲು ಇಂತಹ ಪ್ರಯೋಗಗಳು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಆರ್ಯಭಟ ಸಂಸ್ಥೆಯ ಸತೀಶ್ ಹಾಗೂ ಲಕ್ಷ್ಮೀಪತಿಯವರು ವಿದ್ಯಾರ್ಥಿಗಳಿಗೆ ಶಬ್ದ, ಬೆಳಕು, ಇಲೆಕ್ಟ್ರಾನಿಕ್, ರೋಬೋಟಿಕ್ಸ್ ಬಗ್ಗೆ ಸವಿವರವಾಗಿ ಪ್ರಯೋಗಗಳನ್ನು ಮಾಡಿ ತೋರಿಸಿದರು. ಹಾಗೂ ಡ್ರೋನ್ ಹಾರಾಟದ ಪ್ರಾತ್ಯಕ್ಷಿಕೆಯನ್ನು ತೋರಿಸಿದರು. ಕಾರ್ಯಕ್ರಮದಲ್ಲಿ ವಂ.ಸ್ವಾಮಿ ಅಶ್ವಿನ್ ಕ್ರಾಸ್ತ , ರೋ| ಸಂದೀಪ್ ಮಿನೇಜಸ್ ರೋ| ಪ್ರಭಾಕರ್ ಪ್ರಭು ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕರಾದ ರೋಶನ್ ಪಿಂಟೊ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಭ.ನವೀನ ಎ.ಸಿ ವಂದಿಸಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...