Thursday, June 26, 2025

ಸಾಕಷ್ಟು ಕುತೂಹಲ ಸೃಷ್ಟಿಸಿದ್ದ ಪ್ರಕರಣ ಭೇದಿಸಿದ ಬಂಟ್ವಾಳ ಪೋಲೀಸರು

ಬಂಟ್ವಾಳ: ಒಂದೇ ಪ್ರಕರಣಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ದೂರುಗಳು ಸಾಕಷ್ಟು ಕುತೂಹಲ ಸೃಷ್ಟಿಸಿದ್ದ ಪ್ರಕರಣವೊಂದನ್ನು ಭೇದಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿ.ಮೂಡ ಗ್ರಾಮದ ತಾಳಿಪಡ್ಪು ಮಸೀದಿಯ ಕಳವು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ತಾಳಿಪಡ್ಪು ನಿವಾಸಿ ಮಹಮ್ಮದ್ ಆಶೀಫ್(೨೬) ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಂಗ ಬಂಧನ ವಿಽಸಲಾಗಿದೆ. ಈತ ಮಸೀದಿಯ ಹಳೆಯ ತಾಮ್ರದ ಹಂಡೆ ಹಾಗೂ ಕೇಬಲ್ ಕಳವು ಮಾಡಿರುವ ಕುರಿತು ಹಿದಾಯುತ್ತುಲ್ ಇಸ್ಲಾಂ ಮದರಸ ಕಮಿಟಿಯ ಅಧ್ಯಕ್ಷ ಸೈಯದ್ ಪಲೂಲ್ ಪೊಲೀಸರಿಗೆ ದೂರು ನೀಡಿದ್ದರು.

ಬಂಟ್ವಾಳ ನಗರ ಠಾಣೆಗೆ ಹೊಸದಾಗಿ ಬಂದ ಇನ್ಸ್ಪೆಕ್ಟರ್ ಚೆಲುವರಾಜು ಅವರ ನೇತೃತ್ವದಲ್ಲಿ ಸಬ್‌ಇನ್ಸ್ಪೆಕ್ಟರ್‌ಗಳಾದ ಅವಿನಾಶ್, ಕಲೈಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಽಸಿದ್ದಾರೆ. ಜತೆಗೆ ಕಳವು ನಡೆಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕುತೂಹಲವೆಂಬಂತೆ ಬಂಧಿತ ಆರೋಪಿ ಕೂಡ ಮಹಮ್ಮದ್ ಆಶೀಫ್ ಕೂಡ ಹಸೈನಾರ್ ಹಾಗೂ ಇತರರ ವಿರುದ್ಧ ಹಲ್ಲೆಯ ಆರೋಪ ಹೊರಿಸಿ ದೂರು ನೀಡಿದ್ದನು. ತಾನು ತಾಳಿಪಡ್ಪಿನಲ್ಲಿ ೨ ವರ್ಷಗಳಿಂದ ಲೀಸಿಗೆ ಮನೆ ಪಡೆದು ವಾಸಿಸುತ್ತಿದ್ದೇನೆ. ಆದರೆ ಮನೆಯವರು ತನ್ನ ಹಣ ನೀಡದೇ ಇರುವುದರಿಂದ ಅಲ್ಲಿಂದ ಎದ್ದಿರಲಿಲ್ಲ.

ಇದನ್ನು ಸಹಿಸದೆ ತನ್ನ ವಿರುದ್ಧ ಮಸೀದಿಯಲ್ಲಿ ಕಳವು ನಡೆಸಿದ ಆರೋಪ ಹೊರಿಸಿ ಹಲ್ಲೆ ನಡೆಸಲಾಗಿದೆ ಎಂದು ದೂರು ನೀಡಿದ್ದನು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...