Tuesday, February 3, 2026

CBSE 12ನೇ ತರಗತಿ ಫಲಿತಾಂಶ ಪ್ರಕಟ : 87.33% ವಿದ್ಯಾರ್ಥಿಗಳು ಉತ್ತೀರ್ಣ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2022-23ನೇ ಸಾಲಿನ 12ನೇ ತರಗತಿಯ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡಾ 87.33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸಿಬಿಎಸ್ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು. ಈ ವರ್ಷದ ಜನವರಿ 2 14 ರ ನಡುವೆ 10 ಮತ್ತು 12 ನೇ ತರಗತಿಗಳಿಗೆ ಸಿಬಿಎಸ್ಇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿತ್ತು.

ಫಲಿತಾಂಶವನ್ನು ಅಧಿಕೃತ ವೆಬ್‌ ಸೈಟ್‌ ಗಳಾದ  http://cbse.nic.in ಮತ್ತು http://cbse.gov.in  ನಲ್ಲಿ ಪೋಸ್ಟ್ ಮಾಡಲಾಗಿದೆ. ವಿದ್ಯಾರ್ಥಿಗಳು ಇಲ್ಲಿ ಫಲಿತಾಂಶಗವನ್ನು ನೋಡಬಹುದು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...