Wednesday, January 28, 2026

Installation Ceremony : ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ..

ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿಯಲ್ಲಿ ನಡೆಯಿತು.

ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ.ಪಿ , ಮಾತನಾಡಿ, ರಿಚರ್ಡ್ ಕೋಸ್ತಾ ಎಂ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ ಅಂದ್ರೆ, ಅವರು ಈ ಹಿಂದೆ ಹಲವಾರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ನಾವು ಭಾವಿಸಬಹುದು. ಇನ್ನು ಬೃಹತ್ ಲೋಕ ಅದಾಲತ್ ಯೋಚನೆ ಮಾಡಲಾಗಿದೆ. ಅಲ್ಲಿ ಎಲ್ಲರೂ ಸಹಕಾರ ನೀಡಿ, ಹೆಚ್ಚು ಪ್ರಕರಣ ಇತ್ಯರ್ಥವಾಗಲು ಸಹಕಾರ ನೀಡಬೇಕು ಎಂದು ತಿಳಿಸಿದರು.

ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ರಾದ ಕೃಷ್ಣಮೂರ್ತಿ ಎನ್,ಮಾತನಾಡಿ ಅಧ್ಯಕ್ಷರು ವಕೀಲರ ಸಂಘದ ಮೂಲಕ  ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಮನಸ್ಸು ಅವರದ್ದು, ಜೊತೆಗೆ ಪದಾಧಿಕಾರಿಗಳು ಕೂಡ ಕೈ ಜೋಡಿಸಿದ್ದಾರೆ. ನನ್ನ 3 ವರ್ಷದ ಅವಧಿ ಯಲ್ಲಿ, ಬಂಟ್ವಾಳದಲ್ಲಿ ಯಾವುದೇ ಕೆಟ್ಟ ಅನುಭವ ಆಗಿಲ್ಲ ಎಂದು ಅವರು ತಿಳಿಸಿದರು.ನೂತನ ಎಲ್ಲಾ ಯೋಜನೆಗಳು ಸಾಕಾರಗೊಳ್ಳಲಿ ಎಂದು ಶುಭ ಹಾರೈಸಿದರು.

ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಕೆ.ಎಸ್, ಮಾತನಾಡಿ ಕ್ರಿಯಾಶೀಲ ಸಂಘಟನೆಯ ಪದಾಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಮಾಡಬಹುದು ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಕೀಲರ ಸಂಘ (ರಿ ) ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೋಸ್ತಾಎಂ ಎಂ ಅವರು ಮಾತನಾಡಿ, ಪ್ರಸಕ್ತ ವರ್ಷದಲ್ಲಿ ಮಾಡಬೇಕಾದ ಯೋಜನೆಗಳ ಬಗ್ಗೆ ಪೂರ್ವ ತಯಾರಿ ಮಾಡಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ‌ಅವರು ತಿಳಿಸಿದರು.

ಹೈ ಕೋರ್ಟು ಪೀಠ ಸ್ಥಾಪನೆ ವಿಚಾರದ ಹೋರಾಟಕ್ಕೆ ವೇಗ ನೀಡುವಲ್ಲಿ ವಕೀಲ ಮಿತ್ರರ ಸಹಕಾರ ಯಾಚಿಸಿದರು.

ಕೆಲಸ ಮಾಡುವ ಸಂದರ್ಭದಲ್ಲಿ ಬರುವ ಎಲ್ಲಾ ಅಡೆತಡೆಗಳನ್ನು ಪಾಸಿಟಿವ್ ಆಗಿ ತೆಗೆದುಕೊಂಡು ವಕೀಲರ ಸಂಘದ ಅಭಿವೃದ್ಧಿಯ ಮೂಲಕ ಆಗಬೇಕಾದ ಕೆಲಸಗಳನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಎರಡನೇ ಅವಧಿಗೆ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಎಲ್ಲರಿಗೂ ‌ಧನ್ಯವಾದ ನೀಡಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎನ್. ನಾಯಕ್ ಹಾಗೂ ಗೌರವ ಅತಿಥಿಗಳಾಗಿ , ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿತನುಡಿ ಗಳನ್ನಾಡಿದರು.

ಜೊತೆ ಕಾರ್ಯದರ್ಶಿಯಾದ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ,ಪ್ರದಾನ ಕಾರ್ಯದರ್ಶಿ ಕೆ ನರೇಂದ್ರನಾಥ ಭಂಢಾರಿ ಪ್ರಸ್ತಾವಿಕವಾಗಿ‌ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಉಪಾಧ್ಯಕ್ಷ ದಯಾನಂದ ರೈ, ವಂದಿಸಿದರು.

ಅಭಿನಯ ಚಿದಾನಂದ ಹಾಗೂ ವೀರೇಂದ್ರ ಎಂ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಹಿರಿಯ ಕಿರಿಯ ವಕೀಲ ಮಿತ್ರರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕಿನ ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...