Saturday, January 31, 2026

ಚಂದಳಿಕೆ: ರಾಜ್ಯಮಟ್ಟದ ಕಬಡ್ಡಿ: ಮಂಗಳೂರು ವಿಶ್ವವಿದ್ಯಾನಿಲಯ ಚಾಂಪಿಯನ್

ವಿಟ್ಲ: ಚಂದಳಿಕೆ ಯುವಕೇಸರಿ ಅಬೀರಿ ಅತಿಕಾರಬೈಲು ಆಶ್ರಯದಲ್ಲಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದಲ್ಲಿ ೫ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ನಡೆದ ರಾಜ್ಯ ಮಟ್ಟದ ಪ್ರೋ ಮಾದರಿಯ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾಲಯ ತಂಡ ಮುಂಡ್ಕೂರು ಫ್ರೆಂಡ್ಸ್ ತಂಡವನ್ನು ಮಣಿಸಿ ನಗದು ಬಹುಮಾನ ಹಾಗೂ ಟ್ರೋಫಿಯನ್ನು ಪಡೆದುಕೊಂಡರೆ, ಎಸ್‌ಡಿಎಂ ಉಜಿರೆ ಹಾಗೂ ಮಹಾದೇವಿ ಕಬಕ ತಂಡ ಕ್ರಮವಾಗಿ ತೃತೀಯ ಹಾಗೂ ಚತುರ್ಥ ಬಹುಮಾನ ಪಡೆದುಕೊಂಡಿತು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಬಡವರ ಸೇವೆ ಶ್ರೇಷ್ಠ ಕಾರ್ಯವಾಗಿದೆ. ಸಂಘಟನೆಗಳ ಮೂಲಕ ಬಡಕುಟುಂಬಗಳ ಗುರುತಿಸುವ ಕಾರ್ಯಗಳು ನಡೆಯಬೇಕು. ಸಂಘಟನೆಗಳು ಬಡವರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಂಡಾಗ ಬಡವರು ಹಾಗೂ ಸಂಘಟನೆಗಳು ಅಭಿವೃದ್ಧಿ ಹೊಂದುತ್ತದೆ ಎಂದರು.
ಚಂದಳಿಕೆ ಸರಕಾರಿ ಶಾಲೆಗೆ ಧನಸಹಾಯ ವಿತರಿಸಲಾಯಿತು. ಕ್ಯಾನ್ಸರ್ ರೋಗಕ್ಕೆ ಔಷಧಿ ಕಂಡು ಹಿಡಿದ ಲೀಮಾ ಮ್ಯಾಥ್ಯೂ ಅಡ್ಯನಡ್ಕ ಹಾಗೂ ಉದ್ಯಮಿ ಕೆ. ಸದಾಶಿವ ಆಚಾರ್ಯ ಕೈಂತಿಲ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.
ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲತಾ ಪಟ್ಲ, ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ಚೆಲ್ಲಡ್ಕ, ಜಿಲ್ಲಾ ಕಂಬಳ ಸಮಿತಿ ಸದಸ್ಯ ತ್ರಿಶಾಲ್ ಪೂಜಾರಿ, ಉದ್ಯಮಿ ದೇಜಪ್ಪ ಪೂಜಾರಿ ನಿಡ್ಯ, ನಟಿ ನವ್ಯ ಪೂಜಾರಿ, ವಿಟ್ಲ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪೆಲ್ತಡ್ಕ, ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು, ಮಂಜುನಾಥ ಕಲ್ಲಕಟ್ಟ, ನಾಗೇಶ ಬಸವನಗುಡಿ, ಸಂಜೀವ ಪೂಜಾರಿ ನಿಡ್ಯ, ದಯಾನಂದ ಶೆಟ್ಟಿ ಉಜ್ರೆಮಾರ್, ವಿಠಲ ಪೂಜಾರಿ ಅತಿಕಾರಬೈಲು, ಸುಶಾಂತ್ ಸಾಲಿಯಾನ್ ಚಂದಳಿಕೆ, ದುರ್ಗಾಪ್ರಸಾದ್ ಅತಿಕಾರಬೈಲು ಉಪಸ್ಥಿತರಿದ್ದರು.
ಪದ್ಮನಾಭ ಶೆಟ್ಟಿ ಚಪುಡಿಯಡ್ಕ ಸ್ವಾಗತಿಸಿದರು. ದೈಹಿಕ ಶಿಕ್ಷಕ ಸುರೇಶ್ ಪಡಿಬಾಗಿಲು ಕಾರ್ಯಕ್ರಮ ನಿರೂಪಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...