Monday, January 26, 2026

ವಳಚ್ಚಿಲ್, ಫರಂಗಿಪೇಟೆ ಚಿರತೆ ಪ್ರತ್ಯಕ್ಷ: ಜನರಲ್ಲಿ ಮೂಡಿದ ಆತಂಕ

 

ಬಂಟ್ವಾಳ: ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕವನ್ನು ಉಂಟು ಮಾಡಿದೆ.

ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಗಲ್ಲು ಎಂಬಲ್ಲಿ ಚಿರತೆಯೊಂದನ್ನು ನೋಡಿದ್ದಾಗಿ ತಿಳಿಸಿದ್ದಾರೆ.

ಹತ್ತನೇ ಮೈಲುಗಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಚಿರತೆಯನ್ನು ನೋಡಿದ್ದು ಕೂಡಲೇ ಅದು ಹೆದ್ದಾರಿ ಪಕ್ಕದ ಖಾಲಿ ಜಾಗದಲ್ಲಿ ಓಡಿದೆ ಎಂದು ತಿಳಿಸಿದ್ದಾರೆ.

ಚಿರತೆಯ ಬಗ್ಗೆ ಅವರು ಪಕ್ಕದ ಹೊಟೇಲ್ ಒಂದರಲ್ಲಿದ್ದ ಸ್ಥಳೀಯರಲ್ಲಿ ಮಾಹಿತಿ ನೀಡಿದ್ದು ಬಳಿಕ ಈ ಸುದ್ದಿ ಪರಿಸರದಲ್ಲಿ ಹರಿದಾಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಫರಂಗಿಪೇಟೆ ಸಮೀಪದ ವಳಚ್ಚಿಲ್ ಪದವು ಎಂಬಲ್ಲಿನ ಜನರು ಶನಿವಾರ ಬೆಳಗ್ಗೆ ಪರಿಸರದಲ್ಲಿ ಚಿರತೆಯೊಂದನ್ನು ನೋಡಿದ್ದ ಬಗ್ಗೆ ಸುದ್ದಿ ತಿಳಿದು ಬಂದಿದೆ. ಅದೇ ಚಿರತೆ ರಾತ್ರಿ ಹತ್ತನೇ ಮೈಲುಗಲ್ಲಿನಲ್ಲಿ ಕಂಡುಬಂದಿರಬಹುದು ಎಂದು ಸ್ಥಳೀಯ ಜನರು ತಿಳಿಸಿದ್ದಾರೆ‌.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...