Saturday, January 31, 2026

ಅನಗತ್ಯವಾಗಿ ಪೇಟೆಗೆ ಬಂದರೆ ಬೀಳುತ್ತೆ ದಂಡ!

ಬಂಟ್ವಾಳ: ಕೋವಿಡ್ ನಿಯಂತ್ರಣ ಸಾಧಿಸಲು ಸರಕಾರ ಕಠಿಣ ರೂಲ್ಸ್ ಜಾರಿ ಮಾಡಿದ್ದು ಮೇ.10 ರಿಂದ ಮೇ.24 ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 9 ಗಂಟೆ ಯವರೆಗೆ ಅಗತ್ಯ ವಸ್ತುಗಳ ಖರೀದಿಸಲು ಅವಕಾಶ ನೀಡಲಾಗಿದೆ .
ಆದರೆ ಇದೇ ನೆಪದಲ್ಲಿ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಗರ ಪ್ರದೇಶಗಳಲ್ಲಿ ಸುಮ್ಮನೆ ವಾಹನದಲ್ಲಿ ರೋಡಿಗಿಳಿದರೆ ವಾಹನಗಳ ಸೀಜ್ ಮಾಡಿ ಕಾನೂನು ಕ್ರಮಕೈಗೊಳ್ಳಾಗುವುದು ಎಂದು ಬಂಟ್ವಾಳ ನಗರ ಪೋಲಿಸ್ ಇನ್ಸ್ ಪೆಕ್ಟರ್ ಚೆಲುವರಾಜ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಲಾಕ್ ಡೌನ್ ಅವಧಿಯಲ್ಲಿ ಹೆಚ್ಚಾಗಿ ದ್ವಿಚಕ್ರ ವಾಹನ ದಲ್ಲಿ ನಿಯಮ ಮೀರಿ ಓಡಾಟ ನಡೆಸುತ್ತಿರುವ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ , ಇದೇ ರೀತಿಯಲ್ಲಿ ಅಂಗಡಿ ಬಾಗಿಲಲ್ಲಿ ನಿಂತುಕೊಂಡು ಗುಂಪು ಸೇರದಂತೆ ವಾರ್ನಿಂಗ್ ನೀಡಿದ್ದಾರೆ.
ಅಗತ್ಯ ವಸ್ತುಗಳ ಖರೀದಿಸಲು ಮನೆಯ ಹತ್ತಿರದ ಅಂಗಡಿಗಳನ್ನು ಹೆಚ್ಚಾಗಿ ಬಳಸಿ ಅನಗತ್ಯವಾಗಿ ಪೇಟೆಗೆ ಬಂದು ಹೋಗುವುದನ್ನು ನಿಲ್ಲಿಸಿ ಸೇಫ್ ಆಗಿ ಮನೆಯಲ್ಲಿರಿ ಸರಕಾರದ ನಿಯಮ ಪಾಲನೆ ಮಾಡಿ ಪೋಲೀಸರೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದ್ದಾರೆ.

More from the blog

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...