Wednesday, June 25, 2025

ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ ಫಲಾನುಭವಿಗಳಿಗೆ ಶಾಸಕ ಯು.ಟಿ.ಖಾದರ್ ಚೆಕ್ ವಿತರಣೆ

ಬಂಟ್ವಾಳ, ಡಿ. ೨೬: ಬಂಟ್ವಾಳ ತಾಲೂಕಿನಲ್ಲಿರುವ ಮಂಗಳೂರು ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಕಳೆದ ಮಳೆಗಾಲದಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ ಫಲಾನುಭವಿಗಳಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಗುರುವಾರ ಬಿ.ಸಿ.ರೋಡಿನಲ್ಲಿರುವ ಸಾಮರ್ಥ್ಯ ಸೌಧದಲ್ಲಿ ಚೆಕ್ ವಿತರಿಸಿದರು.
ಈ ವೇಳೆ ಮಾತನಾಡಿದ ಖಾದರ್ ಅವರು, ಹಾನಿ ಪ್ರದೇಶಗಳಿಗೆ ಕಂದಾಯ ಇಲಾಖೆ ಹಾಗೂ ಎಂಜಿನಿಯರ್‌ಗಳು ಭೇಟಿ ನೀಡಿದ ವರದಿಯ ಆಧಾರದಲ್ಲಿ ಪರಿಹಾರ ವಿತರಿಸಲಾಗಿದೆ. ಬಾಲಿ ಉಳಿದಿರುವ ಫಲಾನುಭವಿಗಳಿಗೆ ಶೀಘ್ರ ಪರಿಹಾರ ವಿತರಿಸಲಾಗುತ್ತದೆ ಎಂದರು.
ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ಗ್ರಾ.ಪಂ.ಸದಸ್ಯೆವೃAದಾ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಅವರು ಫಲಾನುಭವಿಗಳ ವಿವರ ನೀಡಿದರು. ಒಟ್ಟು ೩೫ ಮಂದಿಗೆ ಪರಿಹಾರ ಧನದ ಚೆಕ್ ವಿತರಿಸಲಾಯಿತು. ಗ್ರಾಮ ಕರಣಿಕರು ಸಹಕರಿಸಿದರು.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...