ಬಂಟ್ವಾಳ:ಬಂಟ್ವಾಳ ತಾಲೂಕಿನ ಬಿ.ಮೂಡ, ಪಾಣೆಮಂಗಳೂರು, ಬಿ.ಕಸಬ, ಸಜಿಪಮೂಡ ಮತ್ತು ಸಜಿಪಮುನ್ನೂರು ಗ್ರಾಮಗಳ ನೆರೆ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣಾ ಕಾರ್ಯಕ್ರಮ ಸೋಮವಾರ ಬಿ.ಸಿ.ರೋಡಿನ ರೋಟರಿ ಕ್ಲಬ್ ನಲ್ಲಿ ನಡೆಯಿತು.


ನೆರೆ ಸಂತ್ರಸ್ತರಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ನೇತೃತ್ವದ ರಾಜ್ಯ ಸರಕಾರವು ಸಮೀಕ್ಷೆ ನಡೆಸಿ, ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ನೀಡುತ್ತಿದೆ. ಈ ಮೊದಲಲಿದ್ದ ಪರಿಹಾರದ ಮೊತ್ತವನ್ನು 5 ಸಾವಿರದಿಂದ 10ಸಾವಿರಕ್ಕೆ ಹಾಗೂ ತೀವ್ರ ಹಾನಿ ೯೫ಸಾವಿರದಿಂದ ೫ಲಕ್ಷ ರೂ.ವರೆಗೂ ಪರಿಹಾರ ನೀಡಲು ಮುಂದಾಗಿದೆ. ಇಷ್ಟು ತ್ವರಿತವಾಗಿ ಸಂತ್ರಸ್ತರಿಗೆ ಪರಿಹಾರ ನೀಡಿರುವುದು ಇದೇ ಮೊದಲು. ಇದಕ್ಕಾಗಿ ಮುಖ್ಯ ಮಂತ್ರಿ ಅವರಿಗೆ ಕೃತಜ್ಞತೆ ಅರ್ಪಿಸುತ್ತಿದ್ದೇನೆ ಎಂದರು.
ಇಲ್ಲಿಯೂ ಕೂಡಾ ೧೦ ಸಾವಿರದ ಪರಿಹಾರದ ಚೆಕ್ ಅನ್ನು ನೀಡುತ್ತಿದ್ದೇವೆ ಎಂದು ಸ್ಪಷ್ಟ ಪಡಿಸಿದರು. ತಾಲೂಕಿನ ಸುಮಾರು 498 ಕ್ಕೂ ಅಧಿಕ ನೆರೆ ಸಂತ್ರಸ್ತರಿಗೆ ಪರಿಹಾರದ ಚೆಕ್ ಅನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ ಎಸ್.ಆರ್., ಪುರಸಭಾ ಸದಸ್ಯ ಗೋವಿಂದ ಪ್ರಭು ಹಾಜರಿದ್ದರು. ಪುರಸಭಾ ಸದಸ್ಯರಾದ ಮುನೀಶ್ ಅಲಿ, ಸಿದ್ದೀಕ್ ಗುಡ್ಡೆಯಂಗಡಿ, ಮುಹಮ್ಮದ್ ನಂದರಬೆಟ್ಟು,
ಸಿಬ್ಬಂದಿಗಳಾದ ರಮಾ ಕಾಟಿಪಳ್ಳ, ಶಿವಾನಂದ, ಸದಾಶಿವ ಕೈಕಂಬ ಹಾಜರಿದ್ದರು.