ಬಂಟ್ವಾಳ: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ವತಿಯಿಂದ 5 ಕೋಟಿ ರೂ.ಗಳ ಚೆಕ್ ನ್ನು ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬುಧವಾರ ಸಂಜೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನೂತನ ಸಚಿವರಾದ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ದ.ಕ ಜಿಲ್ಲೆಯ ಶಾಸಕರುಗಳಾದ ಸಂಜೀವ ಮಠಂದೂರು, ಉಳಿಪಾಡಿ ರಾಜೇಶ್ ನಾಯ್ಕ್,ಉಮಾನಾಥ ಕೋಟ್ಯಾನ್,ವೇದವ್ಯಾಸ್ ಕಾಮತ್,ಡಾ.ಭರತ್ ಶೆಟ್ಟಿ,ವಿಧಾನಪರಿಷತ್ತಿನ ಮಾಜಿ ಸದಸ್ಯ ಕ್ಯ.ಗಣೇಶ್ ಕಾರ್ಣಿಕ್ ಹಾಗೂ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.
