Wednesday, June 25, 2025

ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಮುಂಬಡ್ತಿಯಾದ ನಂದಕುಮಾರ್

ಬಂಟ್ವಾಳ: ಪುಂಜಾಲಕಟ್ಟೆ ಪೋಲೀಸ್ ಉಪನಿರೀಕ್ಷಕ ನಂದಕುಮಾರ್ ಅವರು ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಮುಂಬಡ್ತಿಯಾಗಿ ಪೋಲೀಸ್ ಇಲಾಖೆ ಅದೇಶ ಹೊರಡಿಸಿದೆ.ಮೂಲತಃ ಮಡಿಕೇರಿಯವರಾಗಿದ್ದು,
ದ.ಕ.ಜಿಲ್ಲೆಯಲ್ಲಿ ತನ್ನದೇ ‌ಆದ ಛಾಪು ಮೂಡಿಸಿ ರೌಡಿಶೀಟರ್ ಗಳ ಪಾಲಿಗೆ ಸಿಂಹಸ್ವಪ್ನರಾಗಿದ್ದ ಎಸ್.ಐ.ನಂದಕುಮಾರ್ ಅವರು ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಮುಂಬಡ್ತಿಯಾಗಿದ್ದಾರೆ.
ಮಡಿಕೇರಿ ತಾಲೂಕಿನಿಂದ ಬಂಟ್ವಾಳದ ನಗರ ಪೋಲೀಸ್ ಠಾಣೆಗೆ ಕಾಲಿರಿಸಿದ ಬಳಿಕ ದ.ಕ.ಜಿಲ್ಲೆಯಲ್ಲಿ ತನ್ನದೇ ಹೆಸರನ್ನು ಉಳಿಸಿಕೊಂಡು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎತ್ತಿದ ಕೈ ಎಂಬ ಮಾತನ್ನು ಪೋಲಿಸ್ ಇಲಾಖೆಯಲ್ಲಿ ನಮೂದಾಗಿಸಿದ್ದಾರೆ.
ಬಂಟ್ವಾಳದ ಬಳಿಕ ಪುತ್ತೂರು ನಗರ ,ಬೆಳ್ತಂಗಡಿ, ಪ್ರಸ್ತುತ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ‌ಕರ್ತವ್ಯ ಮಾಡುತ್ತಿದ್ದಾರೆ.
ಜಿಲ್ಲೆಯ ಅನೇಕ ಸಂಕಷ್ಟದ ಸಮಯದಲ್ಲಿ ಪ್ರತಿಯೊಂದು ಠಾಣೆಯಲ್ಲಿ ಮೇಲಾಧಿಕಾರಿಗಳ ಅದೇಶದಂತೆ ಕರ್ತವ್ಯವನ್ನು ನಿರ್ವಹಿಸಿದವರು.
ಬಂಟ್ವಾಳ ಅಶ್ರಫ್ ಕಲಾಯಿ, ಶರತ್ ಮಡಿವಾಳ, ಪ್ರವೀಣ್ ನೆಟ್ಟಾರು, ಚೂರಿ ಇರಿತದ ಅರೋಪಿಗಳ ಪತ್ತೆ, ಬೆಳ್ತಂಗಡಿ ಮಗು ಅಪಹರಣ, ಉಪ್ಪಿನಂಗಡಿ ಗಲಾಟೆ , ದಿಗಂತ್ ನಾಪತ್ತೆ,ವಿಟ್ಲ ಬ್ಯಾಂಕ್ ದರೋಡೆ, ನಕಲಿ ಐಡಿ ದಾಳಿ ಸಹಿತ ಅನೇಕ ಪ್ರಕರಣಗಳನ್ನು ದಡ ಸೇರಿಸಿದ ಟೀಮ್ ನಾಯಕರಲ್ಲಿ ಇವರು ಒಬ್ಬ ಎಂಬುದು ಸತ್ಯ.
ಇದೀಗ ನಂದಕುಮಾರ್ ಅವರಿಗೆ ಪದೋನ್ನತಿ ನೀಡಿ ಮಂಗಳೂರು ಡಿ.ಎಸ್.ಬಿ.ಕಚೇರಿಗೆ ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.
‌‌

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...