Monday, January 26, 2026

ವಲಸೆ ಕಾರ್ಮಿಕರಿಗೆ ಅಹಾರ ಕಿಟ್ ವಿತರಿಸಿದ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್

ಬಂಟ್ವಾಳ: ವಲಸೆ ಕಾರ್ಮಿಕರ ಯೋಗ ಕ್ಷೇಮ ವಿಚಾರಿಸಿ, ಆಹಾರ ಕಿಟ್ ಗಳನ್ನು ವಿತರಿಸಿದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ನೇತೃತ್ವದ ವಿಟ್ಲ ಪೊಲೀಸ್ ತಂಡ.

ಕೊರೊನಾ ಲಾಕ್ ಡೌನ್ ನ ಸಮಸ್ಯೆಯಿಂದ ಹೊರ ರಾಜ್ಯಗಳಿಂದ ಬಂದ ವಲಸೆ ಕಾರ್ಮಿಕರಿಗೆ ಜಿಲ್ಲೆಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ವಲಸೆ ಕಾರ್ಮಿಕರು ಇರುವ ಬರಿಮಾರು, ಪಲ್ಲಿಪ್ಪಾಡಿ, ಕರಿಯಂಗಳ, ಕುಡ್ತಮುಗೇರು, ಸಾಲೆತ್ತೂರು, ಬಂಟ್ವಾಳ ಕಡೆಗಳಿಗೆಲ್ಲ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ನೇತೃತ್ವದ ಪೊಲೀಸರ ತಂಡ ಬುಧವಾರ ಪರಿಶೀಲನೆ ನಡೆಸಿತು.

ಈಗಾಗಲೇ ಸಾಲೆತ್ತೂರಿನಲ್ಲಿ ಸ್ಥಳೀಯ ಪಂಚಾಯಿತಿ ಮೂಲಕ ವಲಸೆ ಕೂಲಿ ಕಾರ್ಮಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ಒದಗಿಸಲಾಗಿದ್ದು, ಹೆಚ್ಚಿನ ನೆರವಾಗಿ ವಿಟ್ಲ ಠಾಣಾಧಿಕಾರಿ ವಿನೋದ್ ರೆಡ್ಡಿ ಅವರೂ ಬಂಟ್ವಾಳ ವೃತ್ತ ನೀರಿಕ್ಷಕ ಟಿ.ಡಿ. ನಾಗರಾಜ್ ನೇತೃತ್ವದಲ್ಲಿ ಆಹಾರ ಕಿಟ್ ವಿತರಿಸಿದರು. ಪೋಲಿಸ್ ಸಿಬ್ಬಂದಿಗಳಾದ ಲೋಕೆಶ್, ಸತೀಶ್, ಯೋಗೇಶ್ ಹಾಗೂ ಕೊಳ್ನಾಡು ಬೀಟ್ ಸಿಬ್ಬಂದಿ ಅಶೋಕ್ ಕುಮಾರ್ ಉಪಸ್ಥಿತರಿದ್ದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...