Saturday, June 28, 2025

ಕೇಂದ್ರದ ಕೊರೋನಾ ಮಾರ್ಗಸೂಚಿ ಪಾಲನೆಗೆ ನಾಲ್ವರು ಸಚಿವರಿಗೆ ಜವಾಬ್ದಾರಿ ನೀಡಿದ ಸಿಎಂ

ಬೆಂಗಳೂರು: ಲಾಕ್​ಡೌನ್ 2.0 ಜಾರಿಯಾದ ಹಿನ್ನಲೆಯಲ್ಲಿ ಮಾರ್ಗಸೂಚನೆ ಪಾಲನೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಲ್ವರು ಹಿರಿಯ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್​ವೈ ಅವರು ಹಿರಿಯ ಸಚಿವರ ತುರ್ತು ಸಭೆ ನಡೆಸಿದರು. ಈಗಾಗಲೇ ಕೋವಿಡ್-19 ಟಾಸ್ಕ್ ಫೋರ್ಸ್ ರಚನೆ ಮಾಡಿದ್ದರೂ ಹೆಚ್ಚುವರಿಯಾಗಿ ಹೊಣೆಗಾರಿಕೆ ಹಂಚಿಕೆ ಮಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿದ್ದಾರೆ.

19 ದಿನಗಳ ಲಾಕ್​ಡೌನ್ ಪಾಲನೆಗೆ ನೀಡಿರುವ ಮಾರ್ಗಸೂಚಿ ಅನುಷ್ಠಾನ ಕುರಿತು ಸಚಿವರೊಂದಿಗೆ ಸಿಎಂ ಬಿಎಸ್​ವೈ ಮಹತ್ವದ ಸಮಾಲೋಚನೆ ನಡೆಸಿದರು.ಈ ಸಭೆಯಲ್ಲಿ ಮುಂಬೈನಲ್ಲಿ ನಡೆಯುತ್ತಿರುವ ಕಾರ್ಮಿಕರ ವಿದ್ಯಮಾನ ರಾಜ್ಯದಲ್ಲಿ ಆಗದಂತೆ ಮುನ್ನೆಚ್ಚರಿಕಾ ಕ್ರಮದ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಇದರ ಜವಾಬ್ದಾರಿಯನ್ನು ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ನೀಡಲಾಯಿತು. ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಬರುವವರೆಗೂ ಕಾರ್ಮಿಕರು ವಲಸೆಗೆ ಮುಂದಾಗದ ರೀತಿ ನೋಡಿಕೊಳ್ಳುವ ಹೊಣೆಗಾರಿಕೆ ಸುರೇಶ್ ಕುಮಾರ್ ಅವರದ್ದು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕಾನೂನು ಸುವ್ಯವಸ್ಥೆ ಕುರಿತು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎನ್ನುವ ಸೂಚನೆಯೊಂದಿಗೆ ಕೋವಿಡ್-19 ಕಾನೂನು ಸುವ್ಯವಸ್ಥೆ ಹೊಣೆಗಾರಿಕೆ ನೀಡಲಾಯಿತು.

ಡಿಸಿಎಂ ಡಾ. ಅಶ್ವತ್ಥನಾರಾಯಣ್ ಅವರಿಗೆ ಕೃಷಿ ವಲಯದ ಜವಾಬ್ದಾರಿ ಹಂಚಿಕೆ ಮಾಡಿದ್ದು, ಕೋವಿಡ್-19 ಲಾಕ್ ಡೌನ್ ಮುಗಿಯುವವರೆಗೂ ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ನಿಭಾಯಿಸುವ ಹೊಣೆಗಾರಿಕೆ ನೀಡಲಾಗಿದೆ.

ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಬೆಂಗಳೂರು ನಗರದ ಉಸ್ತುವಾರಿ ವಹಿಸಿದ್ದು, ಕೋವಿಡ್-19 ಮುಗಿಯುವವರೆಗೆ ನಗರದಲ್ಲಿ ಕೊರೊನಾ ಸಂಬಂಧಿತ ವಿಷಯಗಳ ಕುರಿತು ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಅಶ್ವತ್ಥನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಸುರೇಶ್ ಕುಮಾರ್, ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...