Friday, June 27, 2025

ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ : ವಾಹನ ಸಂಚಾರ ಬದಲಾವಣೆ  

ಮಂಗಳೂರು: ಮಂಗಳೂರಿನ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ನಗರದ ಮೂಲಕ ಬಿ.ಸಿ.ರೋಡ್‌/ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-ಪಂಪ್‌ವೆಲ್‌-ತೊಕ್ಕೊಟ್ಟು-ಮುಡಿಪು-ಮೆಲ್ಕಾರ್‌ ಮೂಲಕ ಸಂಚರಿಸಬೇಕು.

ಬೆಂಗಳೂರು / ಬಿ.ಸಿ.ರೋಡ್‌ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಕಾರ್‌-ಮುಡಿಪು-ತೊಕ್ಕೊಟ್ಟು-ಪಂಪ್‌ವೆಲ್‌ ಮೂಲಕ ಸಂಚರಿಸಬೇಕು. ಈ ಸಂಚಾರ ಮಾರ್ಪಾಡು ಫೆ.17ರಂದು ಬೆಳಗ್ಗೆ 9ರಿಂದ ಕಾರ್ಯಕ್ರಮ ಮುಗಿಯುವವರೆಗೆ ಇರುತ್ತದೆ.

ವಾಹನ ಪಾರ್ಕಿಂಗ್‌
ಕಾರ್ಯಕ್ರಮಕ್ಕೆ ಬಂಟ್ವಾಳ ಕಡೆಯಿಂದ ಬರುವ ಗಣ್ಯರ ಕಾರುಗಳು ಹಾಗೂ ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕಾಮತ್‌ ಮೈದಾನದಲ್ಲಿ, ಬಂಟ್ವಾಳ ಕಡೆಯಿಂದ ಬರುವ ಸಾರ್ವಜನಿಕರ ಕಾರುಗಳನ್ನು ಅಡ್ಯಾರ್‌ನ ಕರ್ಮಾರ್‌ ಮೈದಾನದಲ್ಲಿ ಪಾರ್ಕಿಂಗ್‌ ಮಾಡಬೇಕು. ಬಂಟ್ವಾಳ ಕಡೆಯಿಂದ ಬರುವ ಬಸ್‌ಗಳು ಕಾರ್ಯಕರ್ತರನ್ನು ಕಾಮತ್‌ ಪಾರ್ಕಿಂಗ್‌ ಬಳಿ ಇಳಿಸಿ ಅಲ್ಲಿಂದ ಮುಂದುವರಿದು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿಶ್ಯಾಮ್‌/ಷಾ ಮೈದಾನದಲ್ಲಿ ನಿಲುಗಡೆಯಾಗಬೇಕು.

ಮಂಗಳೂರು ಕಡೆಯಿಂದ ಬರುವ ಗಣ್ಯರ ಕಾರುಗಳನ್ನು ಅಡ್ಯಾರ್‌ ಗಾರ್ಡನ್‌ನಲ್ಲಿ ಪಾರ್ಕಿಂಗ್‌ ಮಾಡಬೇಕು. ಮಂಗಳೂರು ಕಡೆಯಿಂದ ಬರುವ ಬಸ್‌ಗಳು ಕಾರ್ಯಕರ್ತರನ್ನು ಅಡ್ಯಾರ್‌ ಗಾರ್ಡನ್‌ ಮುಂಭಾಗ ಇಳಿಸಿ ಸೋಮನಾಥಕಟ್ಟೆಯಲ್ಲಿ ಯೂ ಟರ್ನ್ ಆಗಿ ಕಣ್ಣೂರು ಮಸೀದಿ ಬಳಿ ಇರುವ ಷಾ ಮೈದಾನದಲ್ಲಿ ನಿಲುಗಡೆಯಾಬೇಕು.

ಮಂಗಳೂರು ಕಡೆಯಿಂದ ಬರುವ ದ್ವಿಚಕ್ರ ವಾಹನಗಳನ್ನು ಅಡ್ಯಾರ್‌ ಗಾರ್ಡನ್‌ ಮೈದಾನದಲ್ಲಿ ಪಾರ್ಕಿಂಗ್‌ ಮಾಡಬೇಕು. ಅಡ್ಯಾರ್‌ ಕಟ್ಟೆಯಲ್ಲಿರುವ ಜಯಶೀಲ ಅವರ ಮೈದಾನದಲ್ಲಿ ಕೂಡ ಪಾರ್ಕಿಂಗ್‌ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

ತುಳು ನಾಟಕ ಕಾರ್ಯಗಾರ ಉದ್ಘಾಟನಾ ಕಾರ್ಯಕ್ರಮ.. 

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ...

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ..

ಮಂಗಳೂರು : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ವತಿಯಿಂದ 2025 ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿ ಹಾಗೂ ಜಿಲ್ಲಾಮಟ್ಟದಲ್ಲಿ...