ಬೆಂಗಳೂರು: ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮತನಾಡಿದ ಬಳಿಕ ಲಾಕ್ ಡೌನ್ ಮುಂದುವರಿಕೆ ಬಗ್ಗೆ ಟ್ವಿಟರ್ ನಲ್ಲಿ ಸುಳಿವು ನೀಡಿದ ಮುಖ್ಯಮಂತ್ರಿ ಬಿ.ಎಸ್.ವೈ.
ಸಂಕಷ್ಟದಿಂದದಷ್ಟು ಬೇಗ ಹೊರ ಬರಲು ಎಲ್ಲರೂ ಆದಷ್ಟು ಮನೆಯಲ್ಲಿರಿ ಎಂದು ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.
ಲಾಕ್ ಡೌನ್ ನಿಂದ ಅಗುತ್ತಿರುವ ಪರಿಣಾಮವನ್ನು ನಿಭಾಯಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿಯವರು ಕೆಲವು ಸಲಹೆಗಳನ್ನು ನೀಡಿದರು. ಸೊಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಎಲ್ಲಾ ರೀತಿಯ ಕ್ರಮಗಳ ಕುರಿತು ಚರ್ಚಿಸಲಾಯಿತು ಎಂದು ಅವರು ಟ್ವೀಟ್ ಮಾಡಿದ್ದಾರೆ.


