ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ 2018-19ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ನಿಮಿತ್ತ ನಡೆಯುವ ಪ್ರತಿಭಾ ದಿನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಎ.5 ಶುಕ್ರವಾರದಂದು ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ, ತುಳು ರಂಗಭೂಮಿ ನಟ ಚಲನಚಿತ್ರ ಕಲಾವಿದ ಶ್ರೀ ಅರವಿಂದ ಬೋಳಾರ್, ವಿವೇಕಾನಂದ ಕಾಲೇಜು ಪುತ್ತೂರು ಇದರ ಸಂಚಾಲಕ ಜಯರಾಮ ಭಟ್, ಶ್ರೀರಾಮ ಕಾಲೇಜು ಅಭಿವೃದ್ಧಿ ಸಮಿತಿ ಕಲ್ಲಡ್ಕ ಇದರ ಅಧ್ಯಕ್ಷ ಶ್ರೀ ಶಶಿಧರ ಮಾರ್ಲ, ವಿವೇಕಾನಂದ ಕಾಲೇಜು ಪುತ್ತೂರು ಇದರ ಆಡಳಿತ ಮಂಡಳಿ ಸದಸ್ಯೆ ಶೋಭಾ ಕೊಳತ್ತಾಯ, ಮಂಗಳೂರಿನ ಸಿವಿಲ್ ಇಂಜಿನಿಯರ್ ಶ್ರೀ ರಾಮ ಪ್ರಸಾದ್ ಕೊಂಬಿಲ, ಶ್ರೀ ಗಣೇಶ್ ಮೆಡಿಕಲ್ಸ್ ಕಲ್ಲಡ್ಕ ಇದರ ಮಾಲಕ ಚಂದ್ರಶೇಖರ ರೈ, ಕಲ್ಲಡ್ಕ ಹಾಲು ಉತ್ಪಾದಕರ ಸಂಘದ ಮಾಜಿ ಕಾರ್ಯದರ್ಶಿ ರವಿನಾಥ ಪುರುಷ, ಕಲ್ಲಡ್ಕ ರಸಗೊಬ್ಬರ ವ್ಯಾಪಾರಸ್ಥ ನಾರಾಯಣ ನಾಯಕ್ ದಂಡೆಮಾರ್ ಉಪಸ್ಥಿತರಿರುತ್ತಾರೆ ಎಂದು ಪದವಿ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
