Friday, January 30, 2026

ಕೋವಿಡ್ ಪ್ರಮಾಣ ಪತ್ರವಿಲ್ಲದೇ ಪದವಿ ಕಾಲೇಜುಗಳಲ್ಲಿ ಪ್ರವೇಶ ನಿರ್ಬಂಧ

ಮಂಗಳೂರು: ರಾಜ್ಯದಲ್ಲಿ ನವಂಬರ್ 17ರಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ ಕಾಲೇಜುಗಳು ಪ್ರಾರಂಭವಾಗಲಿದ್ದು ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟನ್ನು ಮಾಡಿಸಿಕೊಂಡು ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಅನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಈಗಾಗಲೇ ಕೋವಿಡ್ ಟೆಸ್ಟ್ ಮ್ಯಾಪಿಂಗ್ ಗೆ ಕಾಲೇಜುಗಳು ಲಿಂಕ್ ಮಾಡಲಾಗಿದೆ. ಕೋವಿಡ್ ಟೆಸ್ಟ್ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಕೋವಿಡ್ ನೆಗೆಟಿವ್ ಪ್ರಮಾಣ ಪತ್ರದೊಂದಿದೆ ತರಗತಿಗಳಿಗೆ ಹಾಜರಾಗಬೇಕು ಅದರ ಜೊತೆಗೆ ಪೋಷಕರ ಅನುಮತಿ ಪತ್ರವೂ ಅಗತ್ಯವಾಗಿ ತರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...