Saturday, January 24, 2026

ಕೋಮು ಪ್ರಚೋದನಕಾರಿ ಸುದ್ದಿ ಅಥವಾ ಚಿತ್ರ ಹರಡಿದರೆ ಕಠಿಣ ಕಾನೂನು ಕ್ರಮ: ದ.ಕ. ಎಸ್ಪಿ

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕೋವಿಡ್-19 ದ.ಕ. ಜಿಲ್ಲೆಯಾದ್ಯಂತ ಹಬ್ಬುತಿದ್ದು, ಈ ನಡುವೆ ಒಂದು ನಿರ್ಧಿಷ್ಟ ಕೋಮುವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕವಾಗಿ ಹಾಗೂ ಕೋಮು ಪ್ರಚೋದನಕಾರಿಯಾಗಿ ಸುದ್ದಿಗಳನ್ನು ಭಿತ್ತರಿಸುತ್ತಿರುವುದು ಮತ್ತು ಇತರರೊಂದಿಗೆ ಹಂಚಿಕೊಳ್ಳುತ್ತಿರುವುದು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 4 ಕ್ರಿಮಿನಲ್ ಪ್ರಕರಣಗಳು ದಾಖಲಗಿದೆ.
ಮುಂದಿನ ದಿನಗಳಲ್ಲೂ ಸಹ ಈ ರೀತಿ ಯಾವುದೇ ಕೋಮಿನ ಧಾರ್ಮಿಕತೆಗೆ ಧಕ್ಕೆಯಾಗುವಂತೆ ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಸುದ್ದಿ ಅಥವಾ ಚಿತ್ರಗಳನ್ನು ಭಿತ್ತರಿಸಿದಲ್ಲಿ ಅಥವಾ ಇತರರೊಂದಿಗೆ ಹಂಚಿಕೊಂಡಲ್ಲಿ ಅಂತಹ ಕಿಡಿಗೇಡಿಗಳ ಮೊಬೈಲ್ ವಶಪಡಿಸಲಾಗುವುದು ಹಾಗೂ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಇಂತಹ ಕೃತ್ಯದಲ್ಲಿ ಭಾಗಿಯಾಗಿದ್ದರೆ ಅಂತಹವರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿಟ್ಟು ಕ್ವಾರಂಟೈನ್ ಅವಧಿ ಮುಗಿದ ಕೂಡಲೇ ಅವರುಗಳ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲೆಯ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...

ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ..

ಬಂಟ್ವಾಳ: ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ ಟ್ರಸ್ಟ್ ನ ಅಧ್ಯಕ್ಷ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಕೀಲರಾದ ಅಭಿನಯ ಚಿದಾನಂದ ಮಾತನಾಡಿ...