ಬಂಟ್ವಾಳ: ತಾಲೂಕಿನ ಹೃದಯ ಭಾಗವಾದ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿರುವ ಬಿ.ಸಿ.ರೋಡಿನಲ್ಲಿ ಚಂಡಿಕಾ ಪರಮೇಶ್ವರಿ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿರುವ ಎರಡು ಸಮುದಾಯ ಭವನಗಳ ಪಕ್ಕದಲ್ಲಿರುವ ಖಾಸಗಿ ಜಾಗದಲ್ಲಿ ಕಿಡಿಗೇಡಿಗಳು ತ್ಯಾಜ್ಯ ತಂದು ಎಸೆಯುವ ಪ್ರವೃತ್ತಿಗೆ ಕಡಿವಾಣ ಬಿದ್ದಿಲ್ಲ. ಈಗಲೂ ಅಲ್ಲಿ ತ್ಯಾಜ್ಯ ಎಸೆಯುವ ಪ್ರವೃತ್ತಿ ನಡೆಯುತ್ತಿದ್ದು, ಸಾಕಷ್ಟು ಬಾರಿ ಈ ಬಗ್ಗೆ ಪುರಸಭೆಗೆ ದೂರು ನೀಡಲಾಗಿದೆ.














