Friday, June 27, 2025

ಮುಖ್ಯೋಪಾಧ್ಯಾಯರಿಲ್ಲದ ಸರಕಾರಿ ಶಾಲೆಗಳು: ಕ್ಯಾಂಪಸ್ ಫ್ರಂಟ್ ವಿಟ್ಲ ನಿಯೋಗ ಬೋಳಿಯಾರು, ರಂತಡ್ಕ ಶಾಲೆಗಳಿಗೆ ಭೇಟಿ

ಮೆಲ್ಕಾರ್: ಬೋಳಿಯಾರ್ ಪ್ರಾಥಮಿಕ ಶಾಲೆಯಲ್ಲಿ 121 ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ ಆದರೆ ಅಷ್ಟು ಮಕ್ಕಳಿಗೆ ವಿದ್ಯಾಭ್ಯಾಸವನ್ನು ಕೊಡಲು ದೈಹಿಕ ಶಿಕ್ಷಕಿಯನ್ನು ಸೇರಿ ಕೇವಲ 4 ಶಿಕ್ಷಕರಿಂದ ಕೂಡಿರುವುದು ಹಾಗೂ ವಿಶೇಷವಾಗಿ ಮುಖ್ಯೋಪಾಧ್ಯಾಯರು ಕೂಡ ಇಲ್ಲದಿರುವುದು ಬಹಳ ವಿಪರ್ಯಾಸವಾಗಿದೆ. ಅದೇ ರೀತಿ ರಂತಡ್ಕ ಪ್ರಾಥಮಿಕ ಶಾಲೆಯೂ 85 ಮಕ್ಕಳನ್ನು ಹೊಂದಿದ್ದು ಮುಖ್ಯೋಪಾಧ್ಯಾಯರು ಇಲ್ಲದೇ ಕೇವಲ ಮೂರು ಶಿಕ್ಷಕರನ್ನು ಹೊಂದಿದೆ.

ಕ್ಯಾಂಪಸ್ ಫ್ರಂಟ್ ವಿಟ್ಲ ಜಿಲ್ಲಾ ಸಮಿತಿಯು ಇದರ ಗಂಭೀರತೆಯನ್ನು ಮನಗಂಡು ಶಾಲೆಗಳಿಗೆ ಭೇಟಿ ನೀಡಿ, ಬೋಳಿಯರು ಶಾಲಾ ಸಮಿತಿಯ ಅಧ್ಯಕ್ಷರಲ್ಲಿ ಹಾಗೂ ಅಲ್ಲಿಯ ಶಿಕ್ಷರಲ್ಲಿ ಹಾಗೂ ರಂತಡ್ಕ ಶಾಲೆಯ ಶಿಕ್ಷಕರೊಂದಿಗೆ ಮಾತುಕತೆ ನಡೆಸಿ, ಮೆಲ್ಕಾರ್ ವಲಯದ ಬೋಳಿಯಾರ್ ಹಾಗೂ ರಂತಡ್ಕ ಪ್ರಾಥಮಿಕ ಶಾಲೆಗಳಿಗೆ ವಿದ್ಯಾಭ್ಯಾಸ ಕೊಡಲು ಬೇಕಾಗಿರುವ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರನ್ನು ನೇಮಿಸುವ ಕುರಿತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಭರವಸೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ವಿಟ್ಲ ಅಧ್ಯಕ್ಷರಾದ ಫಯಾಜ್ ಕಲ್ಲಡ್ಕ, ಜಿಲ್ಲಾ ಸಮಿತಿ ಸದಸ್ಯ ಉಮರ್ ಮುಕ್ತಾರ್ ಮೆಲ್ಕಾರ್ ಏರಿಯಾ ಅಧ್ಯಕ್ಷರಾದ ಫಯಾಝ್ ಆಲಾಡಿ ಉಪಸ್ಥಿತರಿದ್ದರು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ವಿಟ್ಲ

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...