ಬಂಟ್ವಾಳ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ವಾಭಿಮಾನದೊಂದಿಗೆ ಸ್ವಾವಲಂಬಿ ಬದುಕನ್ನು ಸಾಗಿಸಿ, ಸಮಾಜಕ್ಕೆ ಆದರ್ಶಪ್ರಾಯರಾಗಿದ್ದ ಶ್ಯಾಮರಾಯರ ನಿಧನ ತುಂಬಲಾರದ ನಷ್ಟ ತಂದಿದೆ ಎಂದವರು ತಿಳಿಸಿದ್ದಾರೆ.














