Friday, June 27, 2025

ವಿಧಾನ ಪರಿಷತ್ ಚುನಾವಣೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಬಂಟ್ಚಾಳ ಮೂಲದ ಮಂಜುನಾಥ ಭಂಡಾರಿ ಆಯ್ಕೆ

ಬಂಟ್ವಾಳ: ಬಾರೀ ಕುತೂಹಲ ಕೆರಳಿಸಿದ್ದ ದ.ಕ.ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಕೊನೆಗೂ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು ಬಂಟ್ವಾಳ ಮೂಲದ ಮಂಜುನಾಥ ಭಂಡಾರಿ ಕಾಂಗ್ರೆಸ್ ಆಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ.

ದ.ಕ.ಸ್ಥಳೀಯ ಸಂಸ್ಥೆಗಳ ಸ್ಥಾನವು ಎರಡು ಪರಿಷತ್ ಸದಸ್ಯರ ನ್ನು ಹೊಂದಿದ್ದು ಈ ಗಾಗಿ ಮಂಜುನಾಥ ಭಂಡಾರಿ ಅವರು ಆಯ್ಕೆ ಯಾದರೆ ಬಂಟ್ವಾಳ ದಲ್ಲಿ ಒಂದು ಪರಿಷತ್ ಸ್ಥಾನ ಒಳಿದಂತಾಗುತ್ತದೆ.

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಮೂಲದವರಾದ ಮಂಜುನಾಥ ಭಂಡಾರಿ ಅವರು ತಮ್ಮ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ವನ್ನು ಬಂಟ್ವಾಳ ದಲ್ಲಿ ಯೇ ಮುಗಿಸಿದ್ದರು.

ಬಳಿಕ ಉನ್ನತ ಶಿಕ್ಷಣ ವನ್ಬು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ದಲ್ಲಿ‌ಪೂರೈಸಿದರು.

ವಿದ್ಯಾರ್ಥಿ ದೆಸೆಯಿಂದ ಲೇ ಕಾಂಗ್ರೇಸ್ ಪಕ್ಷದ ಲ್ಲಿ ಸಕ್ರಿಯ ರಾಗಿದ್ದ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ದ್ದರು.

ಪ್ರಸ್ತುತ ಉದ್ಯಮಿಯಾಗಿರುವ ಅವರು ಅಡ್ಯಾರು ಸಹ್ಯಾದ್ರಿ ಕಾಲೇಜ ನ್ನು ಮುನ್ನಡೆಸುತ್ತಿದ್ದಾರೆ.

ಎರಡು ಸ್ಥಾನ ಗಳ ಈ‌ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿಯವರು ನಾಮಪತ್ರ ಸಲ್ಲಿಸಿದ್ದು ಅವರು ಪರಿಷತ್ ಸ್ಥಾನಕ್ಕೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿ ದೆ.

ಈ ಹಿಂದಿನ ಅವಧಿಗಳಲ್ಲಿ ಮತ್ತೊಂದು ಸ್ಥಾನವನ್ನು ಕಾಂಗ್ರೇಸ್ ಗಳಿಸಿಕೊಂಡಿತ್ತಾದರೂ ಹಿಂದಿನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಯವರು ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ಕಾಂಗ್ರೇಸ್ ನಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿ ತ್ತು.

ಕೊನೆಯ ಕ್ಷಣದವರೆಗೂ ಪಕ್ಷದ ಅಧಿಕೃತ ಅಭ್ಯರ್ಥಿ ಯಾರು ? ಎಂಬುದು ಕುತೂಹಲ ಕ್ಕೆ ಕಾರಣವಾಗಿತ್ತು. ಈ ನಡುವೆ ಸಹಕಾರಿ ಧುರೀಣ ಡಾ! ಎಂ.ಎನ್ ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಸ್ಪರ್ಧೆಗೆ ಒಳವು ತೋರಿ ಬಳಿಕ ಕಾಂಗ್ರೇಸ್ ವಲಯದಲ್ಲೂ ಅವರ ಹೆಸರು ಕೇಳಿ ಬಂದಿತ್ತು.

ಬಳಿಕ ಸಹಕಾರಿ ಕ್ಷೇತ್ರದ ಲ್ಲಿ ರಾಜಕೀಯ ಬರಬಾರದೆಂದು ಸ್ವತಃ ಅವರೇ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.

ಕಾಂಗ್ರೇಸ್ ನಲ್ಲಿ ಆಕ್ಷಾಂಕ್ಷಿಗಳ ಪಟ್ಟಿ ಹೆಚ್ಚಿದ್ದ ಹಿನ್ನೆಲೆಯಲ್ಲಿ

ಒಂದೊಮ್ಮೆ ಕಾಂಗ್ರೇಸ್ ನಲ್ಲಿ ಭಿನ್ನಮತ ಸ್ಫೋಟ ಗೊಂಡರೆ ಅಧಿಕೃತ ಅಭ್ಯರ್ಥಿ ಯ ಗೆಲುವಿಗೆ ಕಂಟಕವಾಗುವ ಸಾಧ್ಯತೆ ಯನ್ನು ಅಲ್ಲಗಳೆಯುವಂತಿಲ್ಲ.

ನಾಮಪತ್ರ ಸಲ್ಲಿಕೆಗೆ ನ.23. ( ನಾಳೆ) ಕೊನೆಯ ದಿನಾಂಕವಾಗಿದ್ದು ಯಾರೆಲ್ಲ ನಾಮಪತ್ರ ಸಲ್ಲಿಸುತ್ತಾರೆ ಎಂದು ಕಾದುನೋಡಬೇಕಾಗಿದೆ.

ಒಂದೊಮ್ಮೆ ಕಣದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ನ ಅಭ್ಯರ್ಥಿ ಗಳು ಮಾತ್ರ ಉಳಿದರೆ ಅವಿರೋಧವಾಗಿ ಆಯ್ಕೆ ಯಾಗುವ ಸಾಧ್ಯತೆ ಗಳಿವೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...