Thursday, June 26, 2025

ಮಹಿಳೆಯರ ರಕ್ಷಣೆಗಾಗಿ ಹಲವಾರು ಕಾನೂನುಗಳನ್ನು ತಂದದ್ದೇ ಕಾಂಗ್ರೆಸ್ ಸರಕಾರ: ಮಾಜಿ ಸಚಿವ ರಮಾನಾಥ್ ರೈ

ಬಂಟ್ವಾಳ: ಪಕ್ಷ ಸಂಘಟನೆಗಾಗಿ ಪಿಲಾತಬೆಟ್ಟುವಿನಲ್ಲಿ ಮಹಿಳಾ ವಲಯ ಕಾಂಗ್ರೆಸ್ ಸಭೆಗೆ ಚಾಲನೆ ಕೊಟ್ಟ ಬಿ ರಮಾನಾಥ್ ರೈ.

ಪಿಲಾತಬೆಟ್ಟು ಮಹಿಳಾ ವಲಯ ಕಾಂಗ್ರೆಸ್ ನ ಸಭೆಯು ವಾಲ್ಟರ್ ಪಿಂಟೋ ರವರ ಮನೆಯ ವಠಾರದಲ್ಲಿ ಜರಗಿತು. ಸಮಾರಂಭದಲ್ಲಿ ಮಾಜಿ ಸಚಿವರಾದ  ಬಿ ರಮಾನಾಥ ರೈಯವರು ಹಾಗೂ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲವೀನ ಮೊರಸ್, ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಬ್ಲಾಕ್ ಉಪಾಧ್ಯಕ್ಷರಾದ ಖಂಡಿಗೆ ಸುಧಾಕರ್ ಶೆನೋಯ್ ಹಾಗೂ ಪಿಲಾತ್ತಬೆಟ್ಟು ವಲಯದ ಪ್ರಮುಖರಾದ ಸಿಂತಿಯಾ ಪಿಂಟೋ, ಪುಷ್ಪಲತಾ ಮೋಹನ್, ಬೇನೆಡಿಕ್ಟ್ರ ಡಿ ಸೋಜಾ, ಪ್ರಮೀಳಾ ಬಾಲಾಜಿ, ರಾಜೇಂದ್ರ ಕೆವಿ,ಬಾಲಾಜಿ ರಾವ್, ನೆಲ್ವಿಸ್ಟರ್ ಪಿಂಟೋ, ಮೋಹನ್ ಸಾಲಿಯಾನ್, ವಾಲ್ಟರ್ ಪಿಂಟೊ ಹಾಗೂ ಎಲ್ಲಾ ಸಮಿತಿಯ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು

ಲವೀನಾ ಮೋರಸ್ ರವರು ಸರ್ಕಾರದಿಂದ ಮಹಿಳೆಯರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ತದನಂತರ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಅವರು ಪಿಲಾತಬೆಟ್ಟು ಗ್ರಾಮದಲ್ಲಿ ಇಷ್ಟೊಂದು ಮಹಿಳೆಯರು ಸೇರಿದ್ದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ದಿಕ್ಸೂಚಿ ಎಂದರು. ಮೊತ್ತಮೊದಲ ವಲಯ ಮಟ್ಟದ ಮಹಿಳಾ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಪಕ್ಷದ ಪ್ರಮುಖರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆಯನ್ನು ಸಲ್ಲಿಸಿದರು.

ಮಹಿಳೆಯರಿಗೆ ಚುನಾವಣೆಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್, ಸಾಮಾಜಿಕ ಕ್ಷೇತ್ರದಲ್ಲಿ, ಉದ್ಯಮ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಕಾಂಗ್ರೆಸ್ ನಾಯಕಿ ಇಂದಿರಾಗಾಂಧಿಯವರು ನೀಡಿದ್ದಾರೆ ಅಂತೆಯೇ ಮಹಿಳೆಯರ ರಕ್ಷಣೆಗಾಗಿ ಹಲವಾರು ಕಾನೂನುಗಳನ್ನು ತಂದದ್ದು ಕಾಂಗ್ರೆಸ್ ಸರಕಾರ ಎಂದು ಮಾಜಿ ಸಚಿವ ರಮನಾಥ ರೈ ಅವರು ಹೇಳಿದರು.

ಪುಷ್ಪಲತಾ ಮೋಹನ್ ಸಾಲ್ಯಾನ್ ರವರು ಎಲ್ಲರನ್ನೂ ಸ್ವಾಗತಿಸಿ, ವನಿತಾ ಆನಂದರವರು ಧನ್ಯವಾದ ಹೇಳಿದರು. ಬೆನೆಡಿಕ್ಟ್ ಡಿಸೋಜ ರವರು ಕಾರ್ಯಕ್ರಮ ನಿರೂಪಿಸಿದರು.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...