ಬಂಟ್ವಾಳ: ಕಾವಳಮೂಡೂರು ಗ್ರಾಮ ಪಂಚಾಯತ್ ಕಾಂಗ್ರೆಸ್ ವಲಯ ಮಟ್ಟದ ಪಂಚಾಯತ್ ಮಿಲನ ೨೦೧೯ ಕಾರ್ಯಕ್ರಮ ಎನ್.ಸಿ.ರೋಡಿನ ಎಂ.ಎಂ. ಸಭಾ ಭವನದಲ್ಲಿ ಚಾಲನೆ ನೀಡಲಾಯಿತು.

ಮಾಜಿ ಸಚಿವ ಬಿ ರಮಾನಾಥ ರೈ ಅವರು ಉದ್ಘಾಟಿಸಿ ಮಾತನಾಡಿ, ಮುಂಬರುವ ಪಂಚಾಯತ್ ಚುನಾವಣೆಗೆ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗುವಂತೆ ಹಾಗೂ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಕರೆ ನೀಡಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಿ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಆದ ಸೋಲಿನ ಬಗ್ಗೆ ಪರಾಮವರ್ಶಿಸಿದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್, ಪುರಸಭೆ ಸದಸ್ಯ ಜನಾರ್ದನ ಚೆಂಡ್ತಿಮಾರ್, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ಪಂಚಾಯತ್ ಅಧ್ಯಕ್ಷ ಸಂತೋಷ್ ಪೂಂಜಾ, ಉಪಾಧ್ಯಕ್ಷ ಚಂದ್ರಾವತಿ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.
ವಲಯ ಅಧ್ಯಕ್ಷ ಬಿ.ಆರ್ ಅಂಚನ್ ಸ್ವಾಗತಿಸಿ, ಪಂಚಾಯತ್ ಸದಸ್ಯ ಇಸ್ಮಾಯಿಲ್ ಸಿದ್ದಿಕ್ ವಂದಿಸಿದರು.